ನರೇಂದ್ರ ಪ.ಪೂ.ಕಾಲೇಜಿನ ವಾರ್ಷಿಕೋತ್ಸವ

0

ಪುತ್ತೂರು: ವಿದ್ಯಾರ್ಥಿಗಳು ಜ್ಞಾನದ ನಿಧಿಯಾಗಬೇಕು.ಪ್ರತಿಯೊಬ್ಬರ ಅಂತರಂಗದಲ್ಲಿ ಅಗಾಧ ಶಕ್ತಿಯಿದೆ.ಅದರ ಬಗ್ಗೆ ಯಾರಿಗೂ ಅರಿವಿಲ್ಲ.ಅಂತರಂಗದ ಶಕ್ತಿಯನ್ನು ಪರಿಪೂರ್ಣವಾಗಿ ಬಳಸಿಕೊಳ್ಳುವವರು ಜೀವನದಲ್ಲಿ ಯಶಸ್ಸು ಪಡೆಯುತ್ತಾರೆ. ಎಂದು ಪುತ್ತೂರಿನ ಆದರ್ಶ ಹಾಸ್ಪಿಟಲ್ ನ ಖ್ಯಾತ ವೈದ್ಯರಾದ ಡಾ. ಬಿ. ಶ್ಯಾಮ್ ಹೇಳಿದರು.ಪುತ್ತೂರಿನ ತೆಂಕಿಲದಲ್ಲಿರುವ ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.


ಸ್ಪರ್ಧೆ ಯೋಜನೆಯೊಂದಿಗೆ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನವನ್ನು ಸುಂದರವಾಗಿ ರೂಪಿಸಿಕೊಳ್ಳಬಹುದು.ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಜ್ಞಾನ ಸಂಪಾದನೆ ಮಾಡಿಕೊಳ್ಳುವ ಮೂಲಕ ಜೀವನದಲ್ಲಿ ಯಶಸ್ಸು ಸಾಧಿಸಬೇಕು.ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗುವಂತೆ ಅನೇಕ ಸವಲತ್ತುಗಳಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಂಡು ದೇಶದ ಆಸ್ತಿಯಾಗಬೇಕು.ಯುವ ಶಕ್ತಿ ಈ ದೇಶದ ಅವಿಭಾಜ್ಯ ಅಂಗ, ಈ ದೇಶಕ್ಕಾಗಿ, ಮಣ್ಣಿಗಾಗಿ, ಮಾತೃಭೂಮಿಯ ರಕ್ಷಣೆಗೆ ನಾವು ಸದಾ ಸಿದ್ಧರಾಗಿರಬೇಕು ಎಂದು ಹೇಳಿದರು.


ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ‍್ಯದರ್ಶಿಗಳಾದ ಡಾ. ಕೆ. ಎಂ. ಕೃಷ್ಣ ಭಟ್ ರವರು ಮಾತನಾಡಿ,ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮಿಕ ಪರಂಪರೆಯನ್ನು ಒಳಗೊಂಡ ಆಧುನಿಕ ಶಿಕ್ಷಣ ಸೌಲಭ್ಯವನ್ನು ಒದಗಿಸುವುದು ಈ ಸಂಸ್ಥೆಯ ಉದ್ದೇಶ.ಆಧುನಿಕ ಹಾಗೂ ಸ್ಪರ್ಧಾತ್ಮಕ ಜಗತ್ತಿಗೆ ವಿದ್ಯಾರ್ಥಿಗಳನ್ನು ಅಣಿಗೊಳಿಸಿಕೊಳ್ಳಲು ಶಿಕ್ಷಣ ಕ್ಷೇತ್ರದಲ್ಲಿ ಅಪರಿಮಿತ ಅವಕಾಶಗಳಿದ್ದು ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು.ಸಮಾಜದ ಆಸ್ತಿಗಳಾಗಿ ಹೊರಹೊಮ್ಮಬೇಕಾಗಿದೆ. ಎಂದು ಹೇಳಿದರು.


ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಸತೀಶ್ ಕಲ್ಲೂರಾಯ ರವರು ಮಾತನಾಡುತ್ತಾ,ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿ ಜೀವನವು ಅಧಿಕ ಸವಾಲಿನಿಂದ ಕೂಡಿದ್ದು,ಅದನ್ನು ಸಮರ್ಪಕವಾಗಿ ಎದುರಿಸಲು ಸಕರಾತ್ಮಕ ಧೋರಣೆ ಬೆಳೆಸಿಕೊಳ್ಳಬೇಕು.ವಿದ್ಯಾರ್ಥಿಗಳು ಸಾಧನೆಯ ಹಾದಿಗೆ ಆತ್ಮವಿಶ್ವಾಸವನ್ನೇ ಮೆಟ್ಟಿಲುಗಳನ್ನಾಗಿ ಮಾಡಿಕೊಂಡು ಜೀವನದಲ್ಲಿ ಗೆಲುವು ಸಾಧಿಸಬೇಕು.ಎಂದು ಹೇಳಿದರು.


ವೇದಿಕೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕರಾದ ಸಂತೋಷ ಬಿ., ವಿದ್ಯಾರ್ಥಿ ಸಂಘದ ನಾಯಕನಾದ ದ್ವಿತೀಯ ವಿಜ್ಞಾನ ವಿಭಾಗದ ಹರ್ಷೇಂದ್ರ ಪ್ರಸಾದ್,ಕಾರ‍್ಯದರ್ಶಿಯಾದ ದ್ವಿತೀಯ ವಿಜ್ಞಾನ ವಿಭಾಗದ ನೇತ್ರಾ ಭಟ್ ಉಪಸ್ಥಿತರಿದ್ದರು.ನರೇಂದ್ರ ಪ.ಪೂ.ಕಾಲೇಜಿನ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ಮೋಹಿನಿ ದಿವಾಕರ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.


2023-24 ನೇ ಸಾಲಿನಲ್ಲಿ ಶೈಕ್ಷಣಿಕ,ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು ಮತ್ತು ವಿಜ್ಞಾನ ಸಂಘ,ವಾಣಿಜ್ಯ ಸಂಘ ಮತ್ತು ವಾರ್ಷಿಕೋತ್ಸವದ ಪ್ರಯುಕ್ತ ನಡೆಸಿದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಲಾಯಿತು. ಕೂರ್ನಡ್ಕದ ಮಾಧವ ಪ್ರಭು ಇವರು ಪ್ರತಿಭಾವಂತ ವಿದ್ಯಾರ್ಥಿಗೆ ಶೈಕ್ಷಣಿಕ ಪ್ರೋತ್ಸಾಹಧನವನ್ನು ನೀಡಿದರು.ಉಪನ್ಯಾಸಕಿ ರೇಣುಕಾ, ಸೌಮ್ಯ,ಶರಣ್ಯಾ ,ಕು.ರಮ್ಯಾ ಸಾಧಕ ವಿದ್ಯಾರ್ಥಿಗಳ ಹೆಸರು ವಾಚಿಸಿದರು.
ಪ್ರಾಂಶುಪಾಲ ಪ್ರಸಾದ್ ಶ್ಯಾನಭಾಗ್ ಕಾಲೇಜಿನ ವಾರ್ಷಿಕ ವರದಿಯನ್ನು ಮಂಡಿಸಿದರು.ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀಕಾಂತ ಕೊಳತ್ತಾಯರವರು ಸ್ವಾಗತಿಸಿ, ಉಪನ್ಯಾಸಕಿ ರೇಖಾ ವಂದಿಸಿದರು.ಕಾರ‍್ಯಕ್ರಮವನ್ನು ಉಪನ್ಯಾಸಕಿ ಶಶಿಕಲಾ ನಿರೂಪಿಸಿದರು.ಬಳಿಕ ವಿವಿಧ ಸಾಂಸ್ಕೃತಿಕ ಕಾರ‍್ಯಕ್ರಮಗಳು ನಡೆದವು.

LEAVE A REPLY

Please enter your comment!
Please enter your name here