ಬಳ್ಪ: ಗ್ರಾಮೋತ್ಸವ ಹಾಗೂ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ

0

ದೊಡ್ಡ ಮಟ್ಟದ ಅಭಿವೃದ್ಧಿ ಮೂಲಕ ನಳಿನ್ ಅಭಿನಂದನಾರ್ಹರು- ಸಚಿವ ಭಗವಂತ್ ಖೂಬ

ಸುಬ್ರಹ್ಮಣ್ಯ: ಸಂಸದರ ಆದರ್ಶ ಗ್ರಾಮ ಯೋಜನೆಯಡಿ  ಸಂಸದ ನಳಿನ್ ಕುಮಾರ್ ಕಟೀಲ್ ಅವರು ಬಳ್ಪ ಗ್ರಾ.ಪಂ‌.ನ್ನು ಆಯ್ಕೆ ಮಾಡಿಕೊಂಡು ವಿವಿಧ ಅನುದಾನಗಳನ್ನು ಬಳಸಿ ಗ್ರಾ.ಪಂ. ವ್ಯಾಪ್ತಿಯ ಮೂಲಭೂತ ಸೌಕರ್ಯಗಳ  ಕೆಲಸ ಮಾಡಿ ದೊಡ್ಡ ಮಟ್ಟದ ಅಭಿವೃದ್ಧಿ ಕೆಲಸ ಮಾಡಿರುವ ನಳಿನ್ ಕುಮಾರ್ ಕಟೀಲ್ ಅಭಿನಂದನಾರ್ಹರು ಎಂದು ಕೇಂದ್ರದ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ಮತ್ತು ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಸಚಿವಾಲಯದ ರಾಜ್ಯ ಸಚಿವ ಭಗವಂತ್ ಖೂಬ ಹೇಳಿದರು.
ಅವರು ಗ್ರಾಮ ವಿಕಾಸ ಪ್ರತಿಷ್ಠಾನ ಬಳ್ಪ – ಕೇನ್ಯ, ಗ್ರಾಮ ಉತ್ಸವ ಸಮಿತಿ ಆಶ್ರಯದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಸಂಸದರ ಆದರ್ಶ ಗ್ರಾಮ ಬಳ್ಪದ ಗ್ರಾಮೋತ್ಸವ ಕಾರ್ಯಕ್ರಮ ಬಳ್ಪ ಶಾಲಾ ಆವರಣದಲ್ಲಿ ನಡೆದ ಸಭಾ ಕಾರ್ಯಕ್ರಮ ಹಾಗೂ ಎಂಟು ಕೋಟಿ ವೆಚ್ಚದ ಆರು ಕಾಮಗಾರಿಗಳ ಲೋಕಾರ್ಪಣಾ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿದರು. 
ಸರಕಾರದ ಅನುದಾನ, ಜನಪ್ರತಿನಿಧಿ, ಸ್ಥಳೀಯಾಡಳಿತ, ಕಂಪೆನಿಗಳ ಸಿ.ಎಸ್.ಆರ್. ಅನುದಾನ ತಂದು ನಳಿನ್ ಕುಮಾರ್ ಕಟೀಲ್ ಗ್ರಾಮಸ್ಥರ ಕಲ್ಪನೆಯಂತೆ ಕೆಲಸ ಮಾಡಿದ್ದಾರೆ. ಇಲ್ಲಿನ ಅಭಿವೃದ್ಧಿ ಕೆಲಸ ಇಲ್ಲಿಗೆ ಮಾತ್ರ ಸೀಮಿತವಾಗದೆ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದು ದೇಶದ ಗ್ರಾ.ಪಂ. ಸದಸ್ಯರು ಇಲ್ಲಿಗೆ ಭೇಟಿ ನೀಡುವಂತಾಗಬೇಕು ಎಂದರು.

ಮೋದಿಯಿಂದ ಅಭಿವೃದ್ಧಿ:
ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಸರಕಾರದ ಯೋಜನೆಗಳ ಸಮಗ್ರ ಅನುಷ್ಠಾನ ಆಗುತ್ತಿದೆ. ಮೋದಿ ಸರಕಾರದ ಯೋಜನೆಗಳಿಗೆ ನಾವೆಲ್ಲ ಕೈಜೋಡಿಸಿ, ನಮ್ಮ ಸಹಕಾರವನ್ನು, ಕೊಡುಗೆಯನ್ನು ದೇಶಕ್ಕೆ ನೀಡುವುದು ದೇಶದ ಅಭಿವೃದ್ಧಿಗೆ ನಾವು ನೀಡುವ ಕೊಡುಗೆ ಎಂದು ಹೇಳಿದರು. ನರೇಂದ್ರ ಮೋದಿ ಪ್ರಧಾನಿಯಾದ ಬಳಿ 13 ಕೋಟಿ ಬಡವರು ಬಡತನ ರೇಖೆಗಿಂತ ಹೊರಬಂದಿದ್ದಾರೆ ಎಂದರು.


ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ನ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು.  ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಪ್ರತಾಪ ಸಿಂಹ ನಾಯಕ್, ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಚಿವ ಎಸ್.ಅಂಗಾರ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಬಳ್ಪ ಗ್ರಾಮ ಪಂಚಾಯತ್ ಅಧ್ಯಕ್ಷ ಹರ್ಷಿತ್ ಕಾರ್ಜ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ, ರೋನಿ ರೋಡ್ರಿಗಸ್ ಬಂಟ್ವಾಳ, ಎಂ.ಆರ್.ಪಿ.ಎಲ್.ನ ಶ್ರೀಕೃಷ್ಣ ರಾಜ್, ಗ್ರಾಮ ವಿಕಾಸ ಪ್ರತಿಷ್ಠಾನ ಅಧ್ಯಕ್ಷ ವಿನೋದ್ ಬೊಳ್ಮಲೆ, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಉಮೇಶ್ ಬುಡೆಂಗಿ, ಗ್ರಾಮೋತ್ಸವ ಸಮಿತಿ ಅಧ್ಯಕ್ಷ ಬಾಲಕೃಷ್ಣ ರೈ ಬಿರ್ಕಿ, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿ, ಬಳ್ಪ ಗ್ರಾಮ ಪಂಚಾಯತ್ ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು. ಗ್ರಾಮ ವಿಕಾಸ ಪ್ರತಿಷ್ಠಾನ ಅಧ್ಯಕ್ಷ ವಿನೋದ್ ಬೊಳ್ಮಲೆ ಪ್ರಾಸ್ತಾವಿಕ ಮಾತನಾಡಿದರು. ಸಮಿತಿ ಸದಸ್ಯ ಸುಬ್ರಹ್ಮಣ್ಯ ಕುಳ ಸ್ವಾಗತಿಸಿದರು. ದೇವದಾಸ ರೈ ಬಂಟ್ವಾಳ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here