ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿ:ಪೋಕ್ಸೋ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

0

ಕಾಣಿಯೂರು: ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2019ರಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.


ಕಳಂಜ ನಿವಾಸಿ ರಾಜೇಶ್ ಬಂಧಿತ ಆರೋಪಿ. ತಲೆಮರೆಸಿಕೊಂಡಿದ್ದ ಈತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದರು. ಬೆಳ್ಳಾರೆ ಪೊಲೀಸ್ ಠಾಣಾ ಉಪನಿರೀಕ್ಷಕ ಅಶೋಕ್ ಸಿಎಂ ಹಾಗೂ ಸಿಬ್ಬಂದಿಗಳಾದ ಪ್ರವೀಣ್ ಬಾರ್ಕಿ ಮತ್ತು ಸಂತೋಷ್ ಕೆಜೆ ರವರು ಆರೋಪಿಯನ್ನು ಕಳಂಜ ಗ್ರಾಮದ ಕಿಲಂಗೋಡಿ ಎಂಬಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಽಸಿದೆ.

LEAVE A REPLY

Please enter your comment!
Please enter your name here