ಹಾರಾಡಿ ಶಾಲಾ ವಾರ್ಷಿಕ ಕ್ರೀಡಾಕೂಟ 2023-24

0

ಪುತ್ತೂರು: ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಹಾರಾಡಿ ಇದರ ವಾರ್ಷಿಕ ಕ್ರೀಡಾಕೂಟ 2023-24 ಇತ್ತೀಚೆಗೆ ಕೊಂಬೆಟ್ಟಿನ ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು.

ಪುತ್ತೂರು ನಗರ ಠಾಣೆಯ ಉಪನಿರೀಕ್ಷಕ ಆಂಜನೇಯ ರೆಡ್ಡಿ ವಿದ್ಯಾರ್ಥಿಗಳ ಪಥಸಂಚಲನದ ಗೌರವವನ್ನು ಸ್ವೀಕರಿಸಿದರು. ನಿವೃತ್ತ ಯೋಧ ಮೋನಪ್ಪ ಗೌಡ ಅವರು ಧ್ವಜಾರೋಹಣಗೈದು ದೈಹಿಕ ಕ್ಷಮತೆಯನ್ನು ಕಾಯ್ದುಕೊಳ್ಳಲು ಕ್ರೀಡೆಯ ಮಹತ್ವವನ್ನು ತಿಳಿಸಿದರು. ಕ್ರೀಡಾಜ್ಯೋತಿಯು ಮಹಾಲಿಂಗೇಶ್ವರ ದೇವಾಲಯದಿಂದ ಹೊರಟು ತಾಲೂಕು ಮಟ್ಟದಲ್ಲಿ ಶಾಲೆಯನ್ನು ಪ್ರತಿನಿಧಿಸಿದ ತ್ರೋಬಾಲ್ ತಂಡದೊಂದಿಗೆ ಮೈದಾನವನ್ನು ತಲುಪಿತು. ಉಪನಿರೀಕ್ಷಕ ಆಂಜನೇಯ ರೆಡ್ಡಿ ಕ್ರೀಡಾಜ್ಯೋತಿಯನ್ನು ಸ್ವೀಕರಿಸಿ ದೀಪ ಬೆಳಗಿಸಿ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ ಕ್ರೀಡೆಯಿಂದ ಶಿಸ್ತನ್ನು ಮೈಗೂಡಿಸಿಕೊಂಡಾಗ ಯಾವುದೇ ಸಾಧನೆ ಸಾಧ್ಯ. ಹಾರಾಡಿ ಶಾಲೆಯು ಶಿಸ್ತಿಗೆ ಮತ್ತು ಸಾಧನೆಗೆ ಹೆಸರಾಗಿದೆ ಎಂದರು.

ಎಸ್.ಡಿ.ಎಂ.ಸಿ ಯ ನಿಕಟಪೂರ್ವ ಅಧ್ಯಕ್ಷ ಕೃಷ್ಣನಾಯ್ಕ್ ಶುಭಹಾರೈಸಿದರು. ಎಸ್ ಡಿ ಎಂ ಸಿ ಯ ಅಧ್ಯಕ್ಷ ಸುಲೋಚನಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕ ಕೆ.ಕೆ. ಮಾಸ್ಟರ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಮಮತ ವಂದಿಸಿ, ಜಿಪಿಟಿ ಶಿಕ್ಷಕ ಜನಾರ್ಧನ ಅವರು ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಸರೋಜಿನಿ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರೆಲ್ಲರೂ ಸಕ್ರಿಯವಾಗಿ ಪಾಲ್ಗೊಂಡರು. ವಿದ್ಯಾರ್ಥಿಗಳ ಪೋಷಕರಿಗೆ ಮತ್ತು ಶಾಲಾ ಶಿಕ್ಷಕರಿಗೂ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು.ಉಪಾಧ್ಯಕ್ಷ ಇಸ್ಮಾಯಿಲ್ ಬೊಳುವಾರು ಹಾಗೂ ಸದಸ್ಯರು ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here