ರಾಮಕುಂಜ: ಕಡಬ ತಾಲೂಕಿನ ಕೊಯಿಲ ಗ್ರಾಮದ ಏಣಿತ್ತಡ್ಕ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ 13 ನಿರ್ದೇಶಕ ಸ್ಥಾನಗಳ ಪೈಕಿ 11 ಮಂದಿ ನಿರ್ದೇಶಕರ ಅವಿರೋಧ ಆಯ್ಕೆ ನಡೆದಿದೆ. ಎರಡು ನಿರ್ದೇಶಕ ಸ್ಥಾನಗಳು ಖಾಲಿಯಾಗಿವೆ.
ಹಿಂದುಳಿದ ವರ್ಗ ಪ್ರವರ್ಗ ಬಿ ಮೀಸಲು ಸ್ಥಾನದಿಂದ ಸುಶೀಲ ಬಿ.ಕೆ., ಪರಿಶಿಷ್ಠ ಪಂಗಡ ಮೀಸಲು ಸ್ಥಾನದಿಂದ ವಿಮಲ ಎ.,ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಾಮಾನ್ಯ ಮೀಸಲು ಸ್ಥಾನದಿಂದ ನೀತಾ ಯನ್., ವಾರಿಜ ಆರ್., ಲಲಿತ ಪಿ., ಜಯಂತಿ ಯಸ್., ಶರ್ಮಿಳಾ ಕೆ., ಯಕ್ಷತಾ, ಕುಸುಮಾವತಿ, ಪಾರ್ವತಿ ಪಿ., ತೀರ್ಥಾವತಿಯವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಅನುಸೂಚಿತ ಜಾತಿ ಮೀಸಲು 1 ಸ್ಥಾನಕ್ಕೆ ಹಾಗೂ ಹಿಂದುಳಿದ ವರ್ಗ ಪ್ರವರ್ಗ ಎ ಮೀಸಲು 1 ಸ್ಥಾನಕ್ಕೆ ಯಾವುದೇ ನಾಮಪತ್ರ ಸಲ್ಲಿಕೆಯಾಗದೇ ಇದ್ದ ಹಿನ್ನೆಲೆಯಲ್ಲಿ ಈ ಎರಡು ಸ್ಥಾನಗಳು ಖಾಲಿಯಾಗಿ ಉಳಿದಿವೆ. ಸಹಕಾರ ಸಂಘಗಳ ಹಿರಿಯ ಲೆಕ್ಕಪರಿಶೋಧಕಿ ಕವಿತಾ ಕೆ., ಚುನಾವಣಾಧಿಕಾರಿಯಾಗಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪುಷ್ಪಾ ಸಹಕರಿಸಿದರು.
ಅಧ್ಯಕ್ಷ/ಉಪಾಧ್ಯಕ್ಷರ ಆಯ್ಕೆ:
ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಯು ಡಿ.೨೬ರಂದು ನಡೆದ ನೂತನ ಆಡಳಿತ ಮಂಡಳಿ ಸಭೆಯಲ್ಲಿ ನಡೆಯಿತು. ಅಧ್ಯಕ್ಷರಾಗಿ ಸುಶೀಲ ಬಿ.ಕೆ.,ಹಾಗೂ ಉಪಾಧ್ಯಕ್ಷರಾಗಿ ವಿಮಲ ಎ.,ಅವರು ಆಯ್ಕೆಯಾದರು. ನಿರ್ದೇಶಕರು ಸಭೆಯಲ್ಲಿ ಉಪಸ್ಥಿತರಿದ್ದರು. ಚುನಾವಣಾಧಿಕಾರಿ ಕವಿತಾ ಕೆ.,ಅವರು ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು.