ಕಡಬ: ಗ್ರಾಮ ಪಂಚಾಯತ್ ಕುಟ್ರುಪಾಡಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್ ಇವರ ಸಹಭಾಗಿತ್ವದಲ್ಲಿ ಕುಟ್ರುಪಾಡಿ ಗ್ರಾಮದ ಹಳೆಸ್ಟೇಷನ್ನಲ್ಲಿರುವ ಅಮೃತ ಸರೋವರ ಕೆರೆ ಅಭಿವೃದ್ದಿ ಬಗ್ಗೆ ಪೂರ್ವಭಾವಿ ಸಮಾಲೋಚನಾ ಸಭೆಯು ಕುಟ್ರುಪಾಡಿ ಗ್ರಾ.ಪಂ.ಸಭಾಭವನದಲ್ಲಿ ನಡೆಯಿತು.
ಗ್ರಾ.ಪಂ.ಅಧ್ಯಕ್ಷೆ ಸುಮನ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮೂಲಕ ನಮ್ಮ ಊರು ನಮ್ಮ ಕೆರೆ ಯೋಜನೆಯಡಿ ಕೆರೆಗಳ ಅಭಿವೃದ್ದಿಗೊಳಿಸಲಾಗುತ್ತಿದೆ. ಅದರಂತೆ ಹಳೆಸ್ಟೇಷನ್ನಲ್ಲಿರುವ ಸದ್ರಿ ಕೆರೆಯನ್ನು ಅಭಿವೃದ್ದಿಪಡಿಸಲು ಸಹಕರಿಸಲಾಗುವುದು ಎಂದರು. ಇದೇ ಸಂದರ್ಭದಲ್ಲಿ ಕೆರೆ ಅಭಿವೃದ್ದಿ ಸಮಿತಿ ರಚಿಸಲಾಯಿತು.
ವೇದಿಕೆಯಲ್ಲಿ ಗ್ರಾ.ಪಂ.ಉಪಾಧ್ಯಕ್ಷೆ ಯಶೋಧ, ಶ್ರೀ ಕ್ಷೇತ್ರ ಧ.ಗ್ರಾ.ಯೋ.ಕಡಬ ವಲಯ ಅಧ್ಯಕ್ಷ ರಮೇಶ್ ರೈ, ಮೇಲ್ವಿಚಾರಕ ರವಿಪ್ರಸಾದ್ ಅಲಾಜೆ ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮದ ಪ್ರಮುಖರು ಸಭೆಯಲ್ಲಿ ಉಪಸ್ಥಿತರಿದ್ದು ಸಲಹೆ ಸೂಚನೆ ನೀಡಿದರು. ಪಿಡಿಓ ಆನಂದ ಗೌಡ ಸ್ವಾಗತಿಸಿದರು. ಕಡಬ ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಶಿವಪ್ರಸಾದ್ ಮೈಲೇರಿ ವಂದಿಸಿದರು.