ಕೊಕ್ಕಡ: ಬಯಲು ಆಲಯ ಎಂದೇ ಪ್ರಖ್ಯಾತಿ ಪಡೆದಿರುವ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತಕ್ಕೆ ಭಾರತ ಕ್ರಿಕೆಟ್ ತಂಡದ ಆಟಗಾರ ಕೆ.ಎಲ್.ರಾಹುಲ್ ಜ.17ರಂದು ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಮಂಗಳೂರು ಮೂಲದವರಾದ ಕೆ.ಎಲ್. ರಾಹುಲ್ ಅವರನ್ನು ಕ್ಷೇತ್ರದ ವತಿಯಿಂದ ಗೌರವಿಸಲಾಯಿತು. ದೇವಸ್ಥಾನದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀನಿವಾಸ ಉಪಸ್ಥಿತರಿದ್ದರು.