ಜ.22:ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದ ವಠಾರದಲ್ಲಿ ಯಕ್ಷ ಸಂಗಮದಿಂದ ಯಕ್ಷಗಾನ ಬಯಲಾಟ

0

ಉಪ್ಪಿನಂಗಡಿ: ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠೆ ಜ.22ರಂದು ನಡೆಯಲಿದ್ದು, ಈ ಪ್ರಯುಕ್ತ ಯಕ್ಷ ಸಂಗಮ ಉಪ್ಪಿನಂಗಡಿಯ ನೇತೃತ್ವದಲ್ಲಿ ಉಪ್ಪಿನಂಗಡಿಯಲ್ಲಿ ಹನುಮಗಿರಿ ಮೇಳದವರಿಂದ ಯಕ್ಷಗಾನ ಬಯಲಾಟ ನಡೆಯಲಿದೆ. ಇದರ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು.


ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದ ವಠಾರದಲ್ಲಿ ಜ.22ರಂದು ಸಂಜೆ 6.30ರಿಂದ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಹನುಮಗಿರಿ ಇವರಿಂದ ‘ನವೋ ರಘುವಂಶದೀಪ’ ವೆಂಬ ಯಕ್ಷಗಾನ ಬಯಲಾಟ ನಡೆಯಲಿದೆ. ಇದರ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ವಿಶ್ವಹಿಂದೂ ಪರಿಷತ್‌ನ ಉಪ್ಪಿನಂಗಡಿ ಘಟಕದ ಅಧ್ಯಕ್ಷ ಸುದರ್ಶನ್, ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಸದಸ್ಯ ಜಯಂತ ಪೊರೋಳಿ, ಯಕ್ಷ ಸಂಗಮದ ಶ್ಯಾಮ ಸುದರ್ಶನ್ ಹೊಸಮೂಲೆ, ರವೀಶ್ ಎಚ್.ಟಿ., ಸುಧಾಕರ ಶೆಟ್ಟಿ ಉಪ್ಪಿನಂಗಡಿ, ಗ್ರಾ.ಪಂ. ಸದಸ್ಯರಾದ ಶ್ರೀಮತಿ ಉಷಾ ಮುಳಿಯ, ಸುರೇಶ್ ಅತ್ರೆಮಜಲು, ಧನಂಜಯ ನಟ್ಟಿಬೈಲು, ಪ್ರಮುಖರಾದ ವಿದ್ಯಾಧರ ಜೈನ್, ಮಹೇಶ್ ಬಜತ್ತೂರು, ಹರೀಶ್ ನಟ್ಟಿಬೈಲ್, ಚಂದ್ರಶೇಖರ ಮಡಿವಾಳ, ಪ್ರಸಾದ್ ಬಂಡಾರಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here