ಪುತ್ತೂರು:ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಪುತ್ತೂರು ಹಾಗೂ ಪೊಲೀಸ್ ಇಲಾಖೆ ಪುತ್ತೂರು ಉಪ ವಿಭಾಗದ ಜಂಟಿ ಆಶ್ರಯದಲ್ಲಿ 35ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ-2024 ಕಾರ್ಯಕ್ರಮವು ಜ.20ರಂದು ಬೆಳಿಗ್ಗೆ 10.30ಕ್ಕೆ ಬನ್ನೂರಿನಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಎನ್. ವಿಶ್ವನಾಥ ನಾಯ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಪೊಲೀಸ್ ಇಲಾಖೆ ಪುತ್ತೂರು ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕ ಅರುಣ್ ನಾಗೇಗೌಡ, ಹಿರಿಯ ಮೋಟಾರು ವಾಹನ ನಿರೀಕ್ಷಕ ಅಶ್ಫಾನ್ ಬಿ.ಎಸ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.