ಭಕ್ತಕೊಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

0

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕೆಮ್ಮಿಂಜೆ ವಲಯ ಮತ್ತು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಕೆಮ್ಮಿಂಜೆ ವಲಯ ಇದರ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಜ.21ರಂದು ಸರ್ವೆ ಎಸ್‌ಜಿಎಂ ಪ್ರೌಢ ಶಾಲೆಯಲ್ಲಿ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಮುಂಡೂರು ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ್ ಎನ್‌ಎಸ್‌ಡಿ
ಮಾತನಾಡಿ ಆರೋಗ್ಯ ಉತ್ತಮವಾಗಿದ್ದರೆ ಬದುಕಿನಲ್ಲಿ ಏನು ಬೇಕಾದರೂ ಸಾಧಿಸಬಹುದು ಹಾಗಾಗಿ ಯೋಜನೆಯ ಈ ಕಾರ್ಯಕ್ರಮ ಸದುಪಯೋಗವನ್ನು ಪಡೆದುಕೊಳ್ಳಿ ಎಂದು ತಿಳಿಸಿದರು. ಪುತ್ತೂರು ತಾಲೂಕಿನ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ ಮಾತನಾಡಿ ಯೋಜನೆಯಿಂದ ಹಲವಾರು ಕಾರ್ಯಕ್ರಮಗಳು ನಡೆಯುತ್ತಿದ್ದು ಖಾವಂದರ ಹಾಗೂ ಮಾತೃಶ್ರೀ ಅಮ್ಮನವರ ಈ ಕಾರ್ಯಕ್ರಮದ ಚಿಂತನೆ ಗ್ರಾಮ ಮಟ್ಟದ ಸದಸ್ಯರರಿಗೆ ಉಪಯೋಗವಾಗುವಂತದ್ದು ಎಂದು ಹೇಳಿ ಶುಭ ಹಾರೈಸಿದರು.
ತಾಲೂಕು ಯೋಜನಾಧಿಕಾರಿ ಶಶಿಧರ್ ಎಂ ಇವರು ಯೋಜನೆಯಲ್ಲಿ ಹಾಗೂ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ನಡೆಯುವ ವಿಶೇಷ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.ಎಷ್ಟೇ ಅವಕಾಶಗಳನ್ನು ನೀಡಿದರೂ ಅದನ್ನು ಬಳಸುವ ತಿಳುವಳಿಕೆ ನಮ್ಮಲ್ಲಿದ್ದರೆ ಮಾತ್ರ ಯಶಸ್ಸು ಕಾಣಲು ಸಾಧ್ಯ ಹಾಗಾಗಿ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ ಎಂದು ಶುಭ ಹಾರೈಸಿದರು.
ಎಸ್‌ಜಿಎಂ ಪ್ರೌಢ ಶಾಲಾ ಮುಖ್ಯಗುರು ಮೋಹನ್ ಮಾತನಾಡಿ ಯೋಜನೆಯಿಂದ ನಮ್ಮ ಶಾಲೆಯಲ್ಲಿ ಹಲವಾರು ಕಾರ್ಯಕ್ರಮಗಳು ನಡೆಯುತ್ತಿವೆ, ಶಾಲೆಗೆ ಪೀಠೋಪಕರಣಗಳ ವ್ಯವಸ್ಥೆಯನ್ನು ಒದಗಿಸಿಕೊಟ್ಟಿದೆ ಎಂದು ಹೇಳಿದರು.


ಅತ್ತಾವರ ಕೆಎಂಸಿ ಆಸ್ಪತ್ರೆಯ ಸಂಪರ್ಕಾಧಿಕಾರಿ ಉದಯ್ ಎ ಅರೋಗ್ಯದ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೆಮ್ಮಿಂಜೆ ವಲಯದ ವಲಯಾಧ್ಯಕ್ಷರಾದ ಸುಂದರ್ ಬಲ್ಯಯ ಇವರು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ನಮ್ಮ ವಲಯದಲ್ಲಿ ನಡೆಯುತ್ತಿರುವ ಆರೋಗ್ಯ ತಪಾಸಣಾ ಶಿಬಿರ ನಮಗೆ ತುಂಬಾ ಖುಷಿ ಕೊಟ್ಟಿದೆ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ಅಶೋಕ್ ಎಸ್.ಡಿ, ಭಕ್ತಕೋಡಿ ಒಕ್ಕೂಟದ ಅಧ್ಯಕ್ಷರಾದ ಶಶಿಧರ್ ಎಸ್.ಡಿ, ವಲಯದ ಮೇಲ್ವಿಚಾರಕರಾದ ಪುಷ್ಪಲತಾ, ಜ್ಞಾನವಿಕಾಸ ಸಮನ್ವಯಾಧಿಕಾರಿಯಾದ ಕಾವ್ಯಶ್ರೀ, ಸೇವಾಪ್ರತಿನಿಧಿ ಚಿತ್ರ, ಜನಜಾಗೃತಿ ವೇದಿಕೆಯ ಅಧ್ಯಕ್ಷರು ಹಾಗೂ ಸದಸ್ಯರು, ಜ್ಞಾನವಿಕಾಸ ಕೇಂದ್ರದ ಸದಸ್ಯರು, ಶೌರ್ಯ ವಿಪತ್ತು ಘಟಕದ ಪ್ರತಿನಿಧಿಗಳು, ಮಾಜಿ ಒಕ್ಕೂಟದ ಅಧ್ಯಕ್ಷರು, ಸ್ಥಳೀಯ ಒಕ್ಕೂಟದ ಅಧ್ಯಕ್ಷರು, ಸೇವಾ ಪ್ರತಿನಿಧಿಗಳು, ನವಜೀವನ ಸಮಿತಿಯ ಸದಸ್ಯರು, ಪ್ರಗತಿಬಂದು-ಸ್ವಸಹಾಯ ಸಂಘದ ಸದಸ್ಯರು, ಶಾಲಾ ಆಡಳಿತ ಸಮಿತಿಯವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here