ಕೆಯ್ಯೂರು: ಕೆಯ್ಯೂರು ಗ್ರಾಮದ ಪ್ರಸಿದ್ಧ ಕ್ಷೇತ್ರ ಶ್ರೀ ಮಹಿಷಮರ್ಧಿನಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ರಾಮೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ ವೈದಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜ22ರಂದು ಶ್ರೀ ಕ್ಷೇತ್ರದಲ್ಲಿ ನಡೆಯಿತು.
ಕ್ಷೇತ್ರದ ಪ್ರದಾನ ಆರ್ಚಕ ಶ್ರೀನಿವಾಸರಾವ್, ಆನಂದ ಭಟ್ ಕೆಯ್ಯೂರು ನೇತೃತ್ವದಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲಿಸಿ ನಂತರ ಶ್ರೀ ರಾಮ ತಾರಕ ಹೋಮ ನಡೆಯಿತು.
ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾ ಸಂಘ ಬೆಟ್ಟoಪಾಡಿ ಇವರಿಂದ ಪ್ರಸಂಗ “ಶ್ರೀರಾಮ ಪಟ್ಟಾಭಿಷೇಕ” ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ನಡೆದು, ದೇವಸ್ಥಾನದ ಪ್ರಾಂಗಣದಲ್ಲಿ ಅಳವಡಿಸಲಾದ ಪರದೆಯಲ್ಲಿ ಅಯೋಧ್ಯೆಯಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮದ ನೇರಪ್ರಸಾರದ ವ್ಯವಸ್ಥೆ ಮಾಡಲಾಯಿತು. ನಂತರ ಮಹಾಪೂಜೆ, ಶ್ರೀರಾಮನಿಗೆ ವಿಶೇಷ ಪೂಜೆ ನಡೆದು ಪ್ರಸಾದ ವಿತರಣೆಯ ನಂತರ ಭಕ್ತಾದಿಗಳಿಗೆಲ್ಲಾ ಅನ್ನಸಂತರ್ಪಣೆ ನಡೆಯಿತು.
ಈ ಸಂದರ್ಭದಲ್ಲಿ ವಿವಿದ ಸಂಘ ಸಂಸ್ಥೆಗಳ ಪಧಾಧಿಕಾರಿಗಳು, ಊರಿನ ಭಕ್ತಾಧಿಗಳು, ಕ್ಷೇತ್ರದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.