ಜ.26: ಎವಿಜಿ ಇಂಗ್ಲಿಷ್ ಮೀಡಿಯಂ ಪ್ರಥಮ ವಾರ್ಷಿಕೋತ್ಸವ

0

ಪುತ್ತೂರು: ಕೃಷ್ಣ ನಗರ ಅಲಂಬುಡದಲ್ಲಿ ನೂತನವಾಗಿ ಆರಂಭಗೊಂಡಿರುವ ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ಪ್ರಥಮ ವಾರ್ಷಿಕೋತ್ಸವ ಕಾರ್ಯಕ್ರಮ ಜ.26ರಂದು ಜರುಗಲಿದೆ.
ಶಾಸಕ ಅಶೋಕ್ ಕುಮಾರ್ ರೈ ವಾರ್ಷಿಕೋತ್ಸವ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್‌ನ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಜಿ.ಎಲ್. ಆಚಾರ್ಯ ಜ್ಯುವೆಲ್ಲರ‍್ಸ್‌ನ ಮಾಲಕ ಜಿ.ಎಲ್ ಬಲರಾಮ ಆಚಾರ್ಯ, ಬನ್ನೂರು ಗ್ರಾ.ಪಂ ಉಪಾಧ್ಯಕ್ಷ ಶೀನಪ್ಪ ಕುಲಾಲ್, ಪುತ್ತೂರು ನಗರಸಭೆ ಸದಸ್ಯೆ ಗೌರಿ ಬನ್ನೂರು ಅತಿಥಿಗಳಾಗಿ ಭಾಗವಹಿಸಲಿದ್ದು, ಸಂಸ್ಥೆಯ ಸಂಚಾಲಕ ಎ.ವಿ.ನಾರಾಯಣ ಉಪಸ್ಥಿತಿಯಲ್ಲಿರುತ್ತಾರೆ. ಮಧ್ಯಾಹ್ನ 3 ಗಂಟೆಯಿಂದ ಸಂಸ್ಥೆಯ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here