






ಕಾಣಿಯೂರು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಂಡಾಡಿಕೊಪ್ಪದಲ್ಲಿ 75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಮೋಹನ ಕಮಿತ್ತಿಲು ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ಎಲ್ಲಾ ಅತಿಥಿಗಳು ಸಂವಿಧಾನ ಶಿಲ್ಪಿ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.



ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಚಂದ್ರಶೇಖರ, ದೀಪಾ, ವೇದಾವತಿ, ಅಡುಗೆ ಸಿಬ್ಬಂದಿ ಯಶೋಧ, ಹಿರಿಯ ವಿದ್ಯಾರ್ಥಿಗಳಾದ ಪವನ್, ಹರ್ಷಿತ್, ಕಾರ್ತಿಕ್, ದೀಕ್ಷಿತ್ ಉಪಸ್ಥಿತರಿದ್ದರು. ಶಾಲಾ ಮುಖ್ಯಗುರು ಜಯಂತ ವೈ ಸ್ವಾಗತಿಸಿ, ಸಹಶಿಕ್ಷಕಿ ನಳಿನಾಕ್ಷಿ ವಂದಿಸಿದರು. ಶಾಲಾ ನಾಯಕ ಯಶಸ್ ಸಂವಿಧಾನದ ಪೀಠಿಕೆ ಬೋಧಿಸಿದರು. ಸಹಶಿಕ್ಷಕಿ ಸುನಿತಾ ಕಾರ್ಯಕ್ರಮ ನಿರೂಪಿಸಿದರು.














