ಹನುಮಗಿರಿ: ಈಶ್ವರಮಂಗಲ ಶ್ರೀ ಗಜಾನನ ವಿದ್ಯಾಸಂಸ್ಥೆ ಹನುಮಗಿರಿಯಲ್ಲಿ 75ನೇ ಗಣರಾಜ್ಯೋತ್ಸವ ದಿನವನ್ನು ಆಚರಿಸಲಾಯಿತು. ಶಾಲಾ ಪ್ರಾಂಶುಪಾಲ ಶಾಮಣ್ಣ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಂಸ್ಥೆಯ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯರವರು ಧ್ವಜಾರೋಹಣವನ್ನು ನೆರವೇರಿಸಿ ಪ್ರಪಂಚದಲ್ಲಿ ಭಾರತವು ಗುರುತಿಸುವಂತಾಗಿರುವುದಲ್ಲದೆ ನಾವೆಲ್ಲರು ದೇಶದ ಏಕತೆ ಭದ್ರತೆ ಮತ್ತು ಸಮಗ್ರತೆಗೆ ನಮ್ಮ ಜೀವನವನ್ನು ಮುಡಿಪಾಗಿಡಬೇಕೆಂದರು.
ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕ ಶಿವರಾಮ ಪಿ, ಸಂಸ್ಥೆಯ ಸದಸ್ಯರಾದ ನಾಗಪ್ಪ ಗೌಡ ಬೊಮ್ಮೆಟ್ಟಿ, ಶಾಲಾ ಮುಖ್ಯೋಪಾಧ್ಯಾಯರಾದ ಅಮರನಾಥ್ ಬಿ ಪಿ ಹಾಗೂ ಕನ್ನಡ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರಾದ ನರೇಂದ್ರ ಭಟ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಾಲಾ ಶಿಕ್ಷಕಿ ರೇಖಾ ಇ ಸ್ವಾಗತಿಸಿ, ಪ್ರಿಯ ವಂದಿಸಿದರು. ಕುಮಾರಿ ರಕ್ಷಿತಾ ಕಾರ್ಯಕ್ರಮವನ್ನು ನಿರೂಪಿಸಿದರು.