





ಆಲಂಕಾರು: ಶ್ರೀ ಭಾರತಿ ವಿದ್ಯಾಸಂಸ್ಥೆಗಳು ಆಲಂಕಾರಿನಲ್ಲಿ ಗಣರಾಜ್ಯೋತ್ಸವ ದಿನವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು, ಸಂಸ್ಥೆಯ ಯುವ ಉದ್ಯಮಿ ಭಗವತಿ ಕಿರಣ್ ಪಜ್ಜಡ್ಕ ನೆರವೇರಿಸಿ ವಿದ್ಯಾರ್ಥಿಗಳಿಗೆ ಗಣರಾಜ್ಯ ದಿನದ ಸಂದೇಶವನ್ನು ತಿಳಿಸಿದರು.


ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ಕಾರ್ಯದರ್ಶಿ ಇಂದು ಶೇಖರ್ ಶೆಟ್ಟಿ, ಕನ್ನಡ ಮಾಧ್ಯಮ ವಿಭಾಗದ ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷ ಶ್ರೀನಾಥ್ ಕೇವಳ, ಮುಖ್ಯ ಮಾತಾಜಿ ಆಶಾ ಎಸ್ ರೈ, ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಧ್ವಜಾರೋಹಣದ ಬಳಿಕ ಗಣರಾಜ್ಯ ದಿನದ ಪ್ರಯುಕ್ತ ಹಮ್ಮಿಕೊಳ್ಳಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಬಳಿಕ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಲಾಯಿತು. ಮುಖ್ಯ ಶಿಕ್ಷಕ ಸತೀಶ್ ಕುಮಾರ್ ಜಿ ಆರ್ ಸ್ವಾಗತಿಸಿ. ರೂಪ ವಂದನಾರ್ಪಣೆಗೈದು, ರೇಣುಕಾ ಕಾರ್ಯಕ್ರಮವನ್ನು ನಿರೂಪಿಸಿದರು.












