ಸವಣೂರು ಮೊಗರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ

0

ಪುತ್ತೂರು:ಸವಣೂರು ಮೊಗರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವನ್ನು ಆಚರಿಸಲಾಯಿತು.
ಧ್ವಜಾರೋಹಣ ನೆರವೇರಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರಫೀಕ್ ಎಂ. ಎ ರವರು ಗಣರಾಜ್ಯೋತ್ಸವ ದಿನಾಚರಣೆಯ ಮಹತ್ವ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ಅವರ ಆದರ್ಶದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಗ್ರಾಮ ಪಂಚಾಯತ್ ಸದಸ್ಯ ಬಾಬು ರಜಾಕ್ ಕೆನರಾ ಮಾತನಾಡಿ ನಮ್ಮ ಸಂವಿಧಾನ ಜಾರಿಗೆ ಬಂದಿರುವದರ ಉದ್ದೇಶ, ವಿದ್ಯಾರ್ಥಿಗಳಾಗಿ ಸಂವಿಧಾನದ ಹಕ್ಕು ಕರ್ತವ್ಯಗಳನ್ನು ಯಾವ ರೀತಿ ಬಳಸಿಕೊಳ್ಳಬೇಕು ಎಂಬುದರ ಕುರಿತು ಮಾಹಿತಿ ನೀಡಿದರು.

ಶಾಲಾ ಪ್ರಭಾರ ಮುಖ್ಯ ಗುರು ಜುಸ್ತಿನಾ ಲಿಡ್ವಿನ್ ಸ್ವಾಗತಿಸಿ ಪ್ರಾಸ್ತವಿಕ ಮಾತುಗಳ ಮೂಲಕ ಕಾರ್ಯಕ್ರಮಕ್ಕೆ ಶುಭಹಾರೈಸಿದರು.ಸಹಶಿಕ್ಷಕಿ ಸವಿತಾ ವಂದಿಸಿದರು. ಶಾಲಾ ಸಹಶಿಕ್ಷಕಿ ಶ್ವೇತಾ ಕಾರ್ಯಕ್ರಮ ನಿರೂಪಿಸಿದರು.
ಸಹಶಿಕ್ಷಕರುಗಳಾದ ಜಾನಕಿ, ಗುಲ್ಸನ್ ಕೌಸರ್, ದಯಾಮಣಿ, ಕು. ಪೂರ್ಣಿಮಾ, ಸಹಕರಿಸಿದರು. ಅಡುಗೆ ಸಿಬ್ಬಂದಿಗಳು, ಅಂಗನವಾಡಿ ಸಹಾಯಕಿ, ಅಂಗನವಾಡಿ ಪುಟಾಣಿಗಳು ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here