ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ ಶ್ರೀ ಮಹಾಲಿಂಗೇಶ್ವರ ಗೋಸೇವಾ ಬಳಗದ ನೇತೃತ್ವದಲ್ಲಿ ಕುರಿಯ ಗ್ರಾಮದ ಸಂಪ್ಯದಮೂಲೆಯಲ್ಲಿರುವ ಶ್ರೀ ದೇವಳದ ಗೋವಿಹಾರ ಧಾಮದಲ್ಲಿ ಫೆ. 3 ಮತ್ತು 4ರಂದು ಗೋಲೋಕೋತ್ಸವ ಕಾರ್ಯಕ್ರಮ ನಡೆಯಲಿದ್ದು, ಅದರ ಆಮಂತ್ರಣ ಪತ್ರಿಕೆಯನ್ನು ಜ.26ರಂದು ದೇವಳದ ಸತ್ಯಧರ್ಮ ನಡೆಯಲ್ಲಿ ಬಿಡುಗಡೆಗೊಳಿಸಲಾಯಿತು.
ದೇವಳದ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಪ್ರಾರ್ಥನೆ ಸಲ್ಲಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿರುವ ಇನ್ನೋರ್ವ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಸದಸ್ಯರಾದ ಶೇಖರ್ ನಾರಾವಿ, ರಾಮದಾಸ್ ಗೌಡ, ಬಿ ಐತ್ತಪ್ಪ ನಾಯ್ಕ್, ರವೀಂದ್ರನಾಥ ರೈ ಬಳ್ಳಮಜಲು, ಬಿ.ಕೆ.ವೀಣಾ, ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್, ಪ್ರಸಾದ್ ಶೆಟ್ಟಿ, ಶಿವರಾಮ ಆಳ್ವ, ಸಹಿತ ಹಲವಾರು ಮಂದಿ ಈ ಸಂದರ್ಭ ಉಪಸ್ಥಿತರಿದ್ದರು.