ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎಂ.ಸತೀಶ್ ಭಟ್ ಅವರು ಧ್ವಜಾರೋಹಣಗೈದು, ನಮ್ಮ ದೇಶದ ಪ್ರಜಾಪ್ರಭುತ್ವದ ಮಹತ್ವವನ್ನು ಸಾರುತ್ತಾ ವಿದ್ಯಾರ್ಥಿಗಳು ತಮ್ಮ ಅಗಾಧವಾದ ಶಕ್ತಿ ಮತ್ತು ಸಾಮರ್ಥ್ಯವನ್ನು ಬಳಸಿಕೊಂಡು ದೇಶದ ಚಿತ್ರಣವನ್ನು ಬದಲಾಯಿಸಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಕಾರ್ಯದರ್ಶಿಯಾದ ಕೆ.ಸೇಸಪ್ಪ ರೈಯವರು ಮಾತನಾಡಿ, ಶಾಸನಬದ್ಧವಾದ ಸಂವಿಧಾನ ರಚನೆಯಿಂದ ಆಡಳಿತಾತ್ಮಕ ಸುಧಾರಣೆಗಳು ಕಂಡುಬಂದಿದೆ. ವಿದ್ಯಾರ್ಥಿಗಳು ಸಹ ಸಮಾಜದ ಬೇರೆ ಬೇರೆ ಸ್ಥರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಭಾವಿ ರಾಷ್ಟ್ರದ ಬೆಳವಣಿಗೆಗೆ ಸಹಕಾರಿಯಾಗುವಂತಹ ಕಾರ್ಯ ಚಟುವಟಿಕೆಗಳನ್ನು ಮಾಡುವ ಪ್ರತಿಜ್ಞೆಯನ್ನು ಕೈಗೊಳ್ಳಬೇಕೆಂದು ತಿಳಿಸಿದರು.
ಸಂಸ್ಥೆಯ ಸಹಶಿಕ್ಷಕಿ ಭವ್ಯಾ ಜಿ ಹಾಗೂ ವಿದ್ಯಾರ್ಥಿಗಳಾದ ದುಶ್ಯಂತ್ ಕುಮಾರ್ ಹಾಗೂ ನೂತನ್ ಗಣರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು. ಶಾಲಾ ವಿದ್ಯಾರ್ಥಿಗಳಿಂದ ರಾಷ್ಟ್ರಭಕ್ತಿ ಬಿಂಬಿಸುವ ವಿವಿಧ ಕಾರ್ಯಕ್ರಮಗಳು ಜರುಗಿದವು. ಸಂಸ್ಥೆಯ ಆಡಳಿತಾಧಿಕಾರಿ ಆನಂದ ಎಸ್.ಟಿ, ವ್ಯವಸ್ಥಾಪಕರಾದ ರಮೇಶ್ ರೈ ಆರ್ ಬಿ, ಹಾಗೂ ತಾಂತ್ರಿಕ ಸಲಹೆಗಾರರಾದ ಜಯೇಂದ್ರ ಬಿ ಉಪಸ್ಥಿತರಿದ್ದರು. ಶಾಲಾ ಮುಖ್ಯಶಿಕ್ಷಕಿ ಗಾಯತ್ರಿ ಯು ಎನ್ ಸ್ವಾಗತಿಸಿದರು. ಸಹಶಿಕ್ಷಕಿ ಸಂಚಿತಾ ಕಾರ್ಯಕ್ರಮ ನಿರೂಪಿಸಿದರು. ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಲೋಹಿತಾ ಎ ವಂದನಾರ್ಪಣೆಗೈದರು. ಸಂಸ್ಥೆಯ ಎಲ್ಲಾ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಕಾರ್ಯಕ್ರಮಕ್ಕೆ ಸಹಕರಿಸಿದರು.