ನೆಲ್ಯಾಡಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶಾಂತಿನಗರ-ಗೋಳಿತ್ತಟ್ಟು ಇಲ್ಲಿ 75ನೇ ಗಣರಾಜ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಎಸ್‌ಡಿಎಂಸಿ ಅಧ್ಯಕ್ಷ ಪುರುಷೋತ್ತಮ ಪೂಜಾರಿ ಗುರುಂಪು ಅವರು ಧ್ವಜಾರೋಹಣ ನೆರವೇರಿಸಿದರು. ಅತಿಥಿಗಳಾಗಿ ನಿವೃತ್ತ ಪೊಲೀಸ್ ಅಧಿಕಾರಿ ಪದ್ಮಯ ಗೌಡ ಡೆಂಬಲೆ, ಜೆಸಿಐ ಆಲಂಕಾರು ಘಟಕದ ಅಧ್ಯಕ್ಷೆ ಮಮತಾ ಅಂಬರಾಜೆ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಶಾಲೆಗೆ ಸಪ್ತವರ್ಣಗಳ ವ್ಯವಸ್ಥಿತವಾದ ಧ್ವಜವನ್ನು ಉದ್ಘಾಟಿಸಲಾಯಿತು. ಇದರ ದಾನಿಗಳಾದ ಕುಶಾಲಪ್ಪ ನಾಯ್ಕ್, ತೇಜಸ್, ಪವನ್‌ಕುಮಾರ್, ರಾಘವೇಂದ್ರ ಮುರಿಯೇಲು, ಪುರುಷೋತ್ತಮ ಗುರುಂಪು, ಜೇಸಿಐ ಅಧ್ಯಕ್ಷೆ ಮಮತಾ ಅಂಬರಾಜೆಯವರನ್ನು ಶಾಲೆಯ ವತಿಯಿಂದ ಸನ್ಮಾನಿಸಲಾಯಿತು. ಶಾಲಾ ಮುಖ್ಯ ಶಿಕ್ಷಕ ಪ್ರದೀಪ್ ಬಾಕಿಲ ಅವರು ಗಣರಾಜ್ಯೋತ್ಸವದ ಮಹತ್ವದ ಬಗ್ಗೆ ತಿಳಿಸಿದರು. ಶಾಲಾ ಶಿಕ್ಷಕ ಮಂಜುನಾಥ ಮಣಕವಾಡ ಸ್ವಾಗತಿಸಿ, ವಂದಿಸಿದರು. ಶಾಲಾ ಸಹಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು, ಪೋಷಕರು, ಊರವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.