ಹೊಸಗದ್ದೆ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

0

ನೆಲ್ಯಾಡಿ: ಬಜತ್ತೂರು ಗ್ರಾಮದ ಹೊಸಗದ್ದೆ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಎಸ್‌ಡಿಎಂಸಿ ಉಪಾಧ್ಯಕ್ಷೆ ವಸಂತಲಕ್ಷ್ಮೀಯವರು ಧ್ವಜಾರೋಹಣ ನೆರವೇರಿಸಿದರು. ಶಾಲಾ ಮುಖ್ಯಶಿಕ್ಷಕಿ ವಿದ್ಯಾ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಶಿಕ್ಷಕಿ ಮಾಲತಿ ಅವರು ಗಣರಾಜ್ಯೋತ್ಸವದ ಕುರಿತು ಮಾತನಾಡಿದರು. ಶಾಲಾ ವಿದ್ಯಾರ್ಥಿಗಳಿಂದ ಭಾಷಣ, ದೇಶಭಕ್ತಿಗೀತೆ ಹಾಡಿದರು. ಶಿಕ್ಷಕಿಯರಾದ ಚಿತ್ರಾವತಿ, ಪವಿತ್ರ, ಪ್ರಭ ಸಹಕರಿಸಿದರು. ಎಸ್‌ಡಿಎಂಸಿ ಸದಸ್ಯರು, ಪೋಷಕರು, ಅಕ್ಷರದಾಸೋಹ ಸಿಬ್ಬಂದಿಗಳು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕೊನೆಯಲ್ಲಿ ಸಿಹಿತಿಂಡಿ ವಿತರಿಸಲಾಯಿತು.

LEAVE A REPLY

Please enter your comment!
Please enter your name here