ಬಡಗನ್ನೂರು ವಿಕಲಚೇತನರ ವಿಶೇಷ ಗ್ರಾಮ ಸಭೆ

0

ಬಡಗನ್ನೂರುಃ  ಬಡಗನ್ನೂರು ಗ್ರಾ.ಪಂ ನ  2023-2024ನೇ ಸಾಲಿನ ವಿಕಲಚೇತನರ ವಿಶೇಷ ಗ್ರಾಮ ಸಭೆಯು ಜ.31 ರಂದು ಗ್ರಾ.ಪಂ ಸಭಾಂಗಣದಲ್ಲಿ  ನಡೆಯಿತು. ಗ್ರಾ ಪಂ. ಅಧ್ಯಕ್ಷೆ ಪುಷ್ಪಲತಾ ದೇವಕಜೆ ಅಧ್ಯಕ್ಷತೆ ವಹಿಸಿದ್ದರು. ಪಂಚಾಯತ್ ಉಪಾಧ್ಯಕ್ಷೆ ಸುಶೀಲ ಪಕ್ಯೋಡ್,  ಈಶ್ವರಮಂಗಲ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ನಿಕ್ಕಿಲ್  ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪುತ್ತೂರು ತಾ.ಪಂ ಆಪ್ತ ಸಮಾಲೋಚಕ ಡಾ. ತಾರನಾಥ, ಎಚ್ ಐ.ಯು ಸೋಂಕು ಬಗ್ಗೆ  ಮಾಹಿತಿ ನೀಡಿದರು. ಮಾರ್ಗದರ್ಶಿ ಅಧಿಕಾರಿಯಾಗಿ ವಿಕಲಚೇತನರ ತಾಲೂಕು ಸಂಯೋಜಕ ನವೀನ್ ಕುಮಾರ್ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ಈಶ್ವರಮಂಗಲ ಪ್ರಾಥಮಿಕ ಆರೋಗ್ಯ ಕೇಂದ್ರ ವತಿಯಿಂದ ಅರೋಗ್ಯ ತಪಾಸಣೆ ನಡೆಯಿತು.

 ಕಾರ್ಯಕ್ರಮದಲ್ಲಿ ಗ್ರಾ.ಪಂ ಸದಸ್ಯರು ವಿಕಲಚೇತನರು ಮತ್ತು ಎಂಡೋ ಪೀಡಿತರು, ಎಂಡೋಪೀಡಿತರ ಪೋಷಕರು, ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತರು, ಅಂಗನವಾಡಿ ಸಹಾಯಕಿಯರು, ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಗ್ರಾ. ಪಂ. ಅಭಿವೃದ್ಧಿ ಅಧಿಕಾರಿ ವಸೀಮ ಗಂಧದ ಸ್ವಾಗತಿಸಿ, ವಂದಿಸಿದರು. ಬಡಗನ್ನೂರು ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ  ಹೇಮಾವತಿ  ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here