ಪುತ್ತೂರು: ಫೆ.1ರಂದು ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಗೂ ಸಂಘಟನೆಯ ಹೆಸರನ್ನು ಉಲ್ಲೇಖಿಸಿ ಪತ್ರಿಕಾ ಮಾಧ್ಯಮಗಳಲ್ಲಿ ಬಂದಿರುವ ವರದಿಗಳಿಗೂ ಸಂಬಂಧವಿಲ್ಲ ಎಂದು ಹಿಂಜಾವೇ ಪ್ರಾಂತ ಸಂಯೋಜಕ ದೊ ಕೇಶವಮೂರ್ತಿ ಸ್ಪಷ್ಟನೆ ನೀಡಿದ್ದಾರೆಂದು ಪುತ್ತೂರು ಜಿಲ್ಲಾ ಸಂಯೋಜಕ ಮೋಹನ್ ದಾಸ್ ಕಾಣಿಯೂರು ತಿಳಿಸಿದ್ದಾರೆ.
ಅಭಿಮಾನಿ ಬಳಗದ ಹೆಸರಿನಲ್ಲಿ ಹಿಂದೂ ಜಾಗರಣ ವೇದಿಕೆಯ ನೇತೃತ್ವದಲ್ಲಿ ಕೆಲವೊಂದು ಸಭೆಗಳು ನಡೆದಿದೆ ಅನ್ನೋದು ಪತ್ರಿಕೆ ಮಾಧ್ಯಮಗಳಲ್ಲಿ ಬಂದಿರುತ್ತದೆ. ಈ ಸಭೆಗೂ ಸಂಘಟನೆಗೂ ಯಾವುದೇ ಸಂಬಂಧ ಇರುವುದಿಲ್ಲ ಎಂದು ಸಂಘಟನೆಯು ಸ್ಪಷ್ಟಪಡಿಸುತ್ತಿದೆ. ಮತ್ತು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಗೂ ಸಂಘಟನೆಯ ಹೆಸರನ್ನು ಉಲ್ಲೇಖಿಸಿ ಪತ್ರಿಕಾ ಮಾಧ್ಯಮಗಳಲ್ಲಿ ವರದಿಗಳು ಬಂದಿರುವುದು ಸಂಘಟನೆಯ ಗಮನಕ್ಕೆ ಬಂದಿರುವುದರಿಂದ ಈ ಕಾರ್ಯಕ್ರಮಕ್ಕೂ ಸಂಘಟನೆಗೂ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ. ಅದೇ ರೀತಿ ಈಗಾಗಲೇ ಜಾಗರಣೆ ವೇದಿಕೆಯ ಹೊಸ ಸಂಘಟನಾ ವ್ಯವಸ್ಥೆಯಲ್ಲಿ ಪ್ರಾಂತ, ಜಿಲ್ಲೆ, ತಾಲೂಕು ಸಮಿತಿಗಳನ್ನು ರಚಿಸಲಾಗಿದೆ.(ಈ ಹಿಂದೆ ಇದ್ದ ವಲಯ, ಘಟಕಗಳನ್ನು ವಿಸರ್ಜಿಸಲಾಗಿದೆ). ಹಿಂದೂ ಜಾಗರಣ ವೇದಿಕೆಯು ಒಂದು ಆಂದೋಲನಾತ್ಮಕ ರೂಪದಲ್ಲಿ ಜಾಗೃತ, ಸಂಘಟಿತ, ಸುರಕ್ಷಿತ ಹಿಂದೂ ಸಮಾಜದ ನಿರ್ಮಾಣದ ಕಾರ್ಯಕ್ಕಾಗಿ ಕೆಲಸ ಮಾಡುತ್ತಿರುವ ಸಂಘಟನೆಯಾಗಿರುತ್ತದೆ. ಕಾರ್ಯ ಮತ್ತು ಆಯಾಮಗಳ ಮೂಲಕ ಸಂಘಟನೆಯು ಹೊಸ ಸಂಘಟನಾ ವ್ಯವಸ್ಥೆಯಲ್ಲಿ ಕಾರ್ಯಚಟುವಟಿಕೆಯನ್ನು ಈಗಾಗಲೇ ಮಾಡುತ್ತಿದೆ ಎಂದವರು ತಿಳಿಸಿದ್ದಾರೆ.