ಪುತ್ತೂರು: ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಅವರನ್ನು ಪುತ್ತೂರು ಮಂಡಲದ ಅಧ್ಯಕ್ಷರನ್ನಾಗಿ ನೇಮಿಸಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪತ್ರವೊಂದು ಹರಿದಾಡುತ್ತಿದೆ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರ ಸಹಿ ಇರುವ ಭಾರತೀಯ ಜನತಾ ಪಾರ್ಟಿ ದ.ಕ ಜಿಲ್ಲೆ ಲೆಟರ್‌ಹೆಡ್‌ನ ಈ ಪಟ್ಟಿಯಲ್ಲಿ ಸಂಜೀವ ಮಠಂದೂರು ಅವರನ್ನು ಪುತ್ತೂರು ಮಂಡಲ ಅಧ್ಯಕ್ಷರಾಗಿ ನೇಮಿಸಿರುವ ಬಗ್ಗೆ ಮಾಹಿತಿ ನೀಡಲಾಗಿದೆ. ಆದರೆ ಇದು ನಕಲಿ ಪತ್ರ ಎಂದು ಹೇಳಲಾಗಿದೆ. ಈ ಕುರಿತು ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರನ್ನು ಫೋನ್ ಕರೆ ಮೂಲಕ ಸಂಪರ್ಕಿಸಿದಾಗ ಪತ್ರ ಮತ್ತು ಪಟ್ಟಿಯ ಬಗ್ಗೆ ಸ್ಪಷ್ಟನೆ ನೀಡಿದ್ದು ಇದೊಂದು ನಕಲಿ ಪಟ್ಟಿ ಎಂದು ಸ್ಪಷ್ಟಪಡಿಸಿದ್ದಾರೆ.