ಪುತ್ತೂರು: ದ.ಕ ಜಿಲ್ಲಾ ಮರಾಟ ಸಂರಕ್ಷಣಾ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟ-2024 ಫೆ.11ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ.
ಬೆಳಿಗ್ಗೆ ನಡೆಯುವ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದಾರೆ. ದ.ಕ ಜಿಲ್ಲಾ ಮರಾಟ ಸಂರಕ್ಷಣಾ ಸಮಿತಿ ಅಧ್ಯಕ್ಷ ಅಶೋಕ್ ನಾಯ್ಕ ಕೆದಿಲ ಅಧ್ಯಕ್ಷತೆ ವಹಿಸಲಿದ್ದಾರೆ. ಅಂತಾರಾಷ್ಟ್ರೀಯ ತ್ರೋಬಾಲ್ ಪಂದ್ಯಾಟದಲ್ಲಿ ಪ್ರತಿನಿಧಿಸಿದ ಆಟಗಾರ್ತಿ ಯಶ್ಮಿತಾ ಬೆಳ್ಳೂರು ಕ್ರೀಡಾಜ್ಯೋತಿ ಪ್ರಜ್ವಲಿಸಲಿದ್ದಾರೆ. ನಗರ ಸಭಾ ಸದಸ್ಯ ಪಿ.ಜಿ ಜಗನ್ನಿವಾಸ ರಾವ್ ಅಂಕನವನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು ಎಂ.ಆರ್.ಪಿ.ಎಲ್ ಹೆಚ್ ಆರ್ ಜನರಲ್ ಮ್ಯಾನೇಜರ್ ಸತೀಶ್, ಮಾಜಿ ಶಾಸಕ ಸಂಜೀವ ಮಠಂದೂರು, ಸಂಚಾರಿ ಠಾಣಾ ಉಪ ನಿರೀಕ್ಷಕ ಉದಯರವಿ, ಸಹಿತ ಹಲವು ಮಂದಿ ಗಣ್ಯರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಸಭಾ ಕಾರ್ಯಕ್ರಮದ ಬಳಿಕ ನಡೆಯುವ ಕ್ರೀಡಾಕೂಟದಲ್ಲಿ ಅಂಗನವಾಡಿ ಪುಟಾಣಿಗಳಿಗೆ, ಪ್ರಾಥಮಿಕ, ಪ್ರೌಢ, ಕಾಲೇಜು ವಿಭಾಗ, ಕಿರಿಯ, ಹಿರಿಯ ವಿಭಾಗದಲ್ಲಿ ಮಹಿಳೆಯರು ಹಾಗೂ ಪುರುಷರಿಗೆ ಪ್ರತ್ಯೇಕ ವಿಭಾಗದಲ್ಲಿ ಸುಮಾರು 70 ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ. ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ದ.ಕ ಜಿಲ್ಲಾ ಮರಾಟ ಸಂರಕ್ಷಣಾ ಸಮಿತಿ ಅಧ್ಯಕ್ಷ ಅಶೋಕ್ ನಾಯ್ಕ ಕೆದಿಲ ಅಧ್ಯಕ್ಷತೆ ವಹಿಸಲಿದ್ದಾರೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ರೈಲ್ವೇ ಇಲಾಖೆ ನಿವೃತ್ತ ಅಧಿಕಾರಿ ಮಹಾಲಿಂಗ ನಾಯ್ಕ, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಸಹಿತ ಹಲವು ಮಂದಿ ಗಣ್ಯರು ಅತಿಥಿಗಳಾಗಿ ಆಗಮಿಸಲಿದ್ದಾರೆ. ಕ್ರೀಡಾಕೂಟಲ್ಲಿ ವಿಶೇಷ ಆಹ್ವಾನಿತರಾಗಿ ಸಮಾಜದ ವಿವಿಧ ಕ್ಷೇತ್ರಗಳ ಸಾಧಕರು, ರಾಜ್ಯ ರಾಷ್ಟ್ರ ಮಟ್ಟದಲ್ಲಿ ವಿವಿಧ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳು ವಿಶೇಷ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ.