ಆಲಂಕಾರು: ಶ್ರೀ ದುರ್ಗಾಂಬಾ ಪ್ರೌಢ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗಾಗಿ ರಾತ್ರಿ ವಿಶೇಷ ತರಗತಿಗಳನ್ನು ಪ್ರಾರಂಭಿಸಲಾಯಿತು. ಆಡಳಿತ ಮಂಡಳಿ ಅಧ್ಯಕ್ಷ ದಯಾನಂದ ರೈ ಮನವಳಿಕೆ ದೀಪ ಬೆಳಗಿಸಿ ರಾತ್ರಿ ತರಗತಿಗಳಿಗೆ ಚಾಲನೆ ನೀಡಿದರು.
ವಿದ್ಯಾಸಂಸ್ಥೆಯ ಹಿರಿಯ ವಿದ್ಯಾರ್ಥಿ ಹಾಗು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲಂಕಾರಿನ ಸಹ ಶಿಕ್ಷಕ ಚೆನ್ನಪ್ಪ ನಡುಗುಡ್ಡೆ ಮುಖ್ಯ ಅತಿಥಿಗಳಾಗಿ ವಿದ್ಯಾರ್ಥಿಗಳಿಗೆ ಉತ್ತಮ ಅಂಕಗಳನ್ನು ಪಡೆಯಲು ಯಾವ ರೀತಿ ಅಭ್ಯಾಸವನ್ನು ಮಾಡಬೇಕೆಂಬುದಾಗಿ ಸವಿವರವಾಗಿ ತಿಳಿಸಿದರು.ಆಡಳಿತಾಧಿಕಾರಿ ಶ್ರೀಪತಿ ರಾವ್ ಎಚ್ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ನಮ್ಮ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್ ಆರ್ ರವರು ಎಸ್ ಎಸ್ ಎಲ್ ಸಿ ಯಲ್ಲಿ ನಮ್ಮ ತಾಲೂಕಿನಲ್ಲಿ ಉತ್ತಮ ಫಲಿತಾಂಶವನ್ನು ಪಡೆಯುವ ದೃಷ್ಟಿಯಿಂದ ಉತ್ತಮ ಮಾರ್ಗದರ್ಶನವನ್ನು ನೀಡುತ್ತಿದ್ದು ನಾವು ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿಗಳ ಹೆತ್ತವರು, ಪೋಷಕರ ಸಹಕಾರದಿಂದ ವಿಶೇಷ ರಾತ್ರಿ ತರಗತಿಗಳನ್ನು ಆರಂಭಿಸುತ್ತಿದ್ದೇವೆ. ಎಲ್ಲಾ ವಿದ್ಯಾರ್ಥಿಗಳು ಇದನ್ನು ಸೂಕ್ತ ರೀತಿಯಲ್ಲಿ ಉಪಯೋಗಿಸಿಕೊಂಡು ಉತ್ತಮ ಫಲಿತಾಂಶ ಪಡೆಯಲು ಸಹಕರಿಸಬೇಕಾಗಿ ಮನವಿ ಮಾಡಿದರು.
ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಶ್ರೀನಾಥ್ ಗೌಡ,ಸಹ ಶಿಕ್ಷಕ ಮಹೇಶ್ ಲಮಾಣಿ, ನಿವ್ಯಾ ಪಿ ಎನ್, ದೈಹಿಕ ಶಿಕ್ಷಕ ಶ್ರೇಯಸ್ಸು ರೈ ವಿದ್ಯಾರ್ಥಿಗಳ ಹೆತ್ತವರು ಪೋಷಕರು ಉಪಸ್ಥಿತರಿದ್ದರು.ಸಹ ಶಿಕ್ಷಕ ಜನಾರ್ಧನ ರವರು ಕಾರ್ಯಕ್ರಮ ನಿರೂಪಿಸಿ, ಪ್ರೌಢಶಾಲಾ ಮುಖ್ಯ ಗುರು ನವೀನ್ ರೈ ವಂದಿಸಿದರು.