ಬಡಗನ್ನೂರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಮೆಟ್ರಿಕ್ ಮೇಳ

0

ಮಕ್ಕಳ ವ್ಯವಹಾರ ಜ್ಞಾನ ವೃದ್ಧಿಸಲು ಮೆಟ್ರಿಕ್ ಮೇಳ ಮಹತ್ವ- ಮಹಮ್ಮದ್ ಬಡಗನ್ನೂರು

ಬಡಗನ್ನೂರು: ಬಡಗನ್ನೂರು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮಕ್ಕಳ ಮೆಟ್ರಿಕ್ ಮೇಳ ಕಾರ್ಯಕ್ರಮ ಫೆ.10 ರಂದು ನಡೆಯಿತು. ಕಾರ್ಯಕ್ರಮವನ್ನು ಮಾಜಿ.ತಾ.ಪಂ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬಲು ಮತ್ತು ವ್ಯವಹಾರ ಜ್ಞಾನ ಹೆಚ್ಚಿಸಲು ಮೆಟ್ರಿಕ್ ಮೇಳಗಳಂತಹ ಕಾರ್ಯಕ್ರಮ ಮಹತ್ವವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಶಾಲಾ ಎಸ್. ಡಿ.ಯಂ.ಸಿ ಅಧ್ಯಕ್ಷ ಬಾಬು ಮೂಲ್ಯ,  ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಹರಿಣಾಕ್ಷಿ ಎ, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಮಕ್ಕಳ ಪೋಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.ಶಾಲಾ ಮುಖ್ಯ ಶಿಕ್ಷಕಿ ಹರಿಣಾಕ್ಷಿ ಎ ಸ್ವಾಗತಿಸಿ, ಸಹ ಶಿಕ್ಷಕಿಯರಾದ ವಿಜಯಲಕ್ಷ್ಮಿ ವಂದಿಸಿ, ರಮ್ಯ ಕಾರ್ಯಕ್ರಮ ನಿರೂಪಿಸಿದರು.

ಮಕ್ಕಳ ಸಂತೆಯಲ್ಲಿ  ತರಕಾರಿ, ಜ್ಯೂಸ್, ಹಣ್ಣುಹಂಪಲು, ಚರುಂಬುರಿ, ಗೋಪಿ, ಇತ್ಯಾದಿ ಸುಮಾರು 25 ಬಗೆಯ ಸ್ಟಾಲ್ ಗಳು ಗಮನ ಸೆಳೆದವು.

LEAVE A REPLY

Please enter your comment!
Please enter your name here