






ವಿಟ್ಲ: ರೋಡ್ ರೋಲರ್ ವಾಹನವನ್ನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯೊಂದು ರೈಲ್ವೆ ಓವರ್ ಬ್ರಿಡ್ಜ್ ನ ಅಡಿಭಾಗದಲ್ಲಿ ಸಿಲುಕಿಕೊಂಡ ಘಟನೆ ಫೆ.13ರಂದು ಬೆಳಿಗ್ಗೆ ನಡೆದಿದ್ದು, ಕೆಲ ಹೊತ್ತು ಸಂಚಾರಕ್ಕೆ ಅಡ್ಡಿಯಾದ ಘಟನೆ ಬಿಸಿರೋಡಿನ ಕೈಕಂಬ ಸಮೀಪದ ಮೊಡಂಕಾಪು ಎಂಬಲ್ಲಿ ನಡೆದಿದೆ.



ಪವಿತ್ರ ಗುತ್ತಿಗೆ ಸಂಸ್ಥೆ ಗೆ ಸೇರಿದ ಸೊತ್ತುಗಳು ಇದಾಗಿದ್ದು, ಬೆಂಜನಪದವು ಸೈಟ್ ನಿಂದ ಪುತ್ತೂರು ಸವಣೂರು ಎಂಬಲ್ಲಿ ನಡೆಯಲಿರುವ ಕಾಮಗಾರಿಗೆ ರೋಲರ್ ನ್ನು ಲಾರಿಯಲ್ಲಿ ತುಂಬಿಸಿ ಕೊಂಡು ಹೋಗುವ ವೇಳೆ ಮೊಡಂಕಾಪು ಎಂಬಲ್ಲಿ ರೈಲ್ವೆ ಯ ಅಡಿಭಾಗದಲ್ಲಿ ಕ್ರಾಸ್ ಮಾಡಲು ಸಾಧ್ಯವಾಗದೆ ಸಿಲುಕಿಕೊಂಡಿದೆ.ರೈಲ್ವೆಯ ಓವರ್ ಬ್ರಿಡ್ಜ್ ನ ಎತ್ತರಕ್ಕಿಂತ ಅಧಿಕ ಎತ್ತರದಲ್ಲಿ ಲಾರಿಯ ಲೋಡ್ ಮಾಡಿಕೊಂಡಿದ್ದೇ ಈ ಘಟನೆಗೆ ಕಾರಣವಾಗಿದೆ ಎಂದು ಹೇಳಲಾಗಿದೆ.






ಘಟನೆಯಿಂದ ರೈಲ್ವೆ ಇಲಾಖೆ ಗೆ ಸೇರಿದ ಕಬ್ಬಿಣದ ರಾಡ್ ತುಂಡಾಗಿ ಲಾರಿಯ ಮೇಲೆ ಬಿದ್ದಿದೆ.ಸ್ಥಳಕ್ಕೆ ರೈಲ್ವೆ ಇಲಾಖೆಯವರು ಆಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ. ಘಟನೆ ನಡೆದ ಸಂದರ್ಭದಲ್ಲಿ ಸಂಚಾರಕ್ಕೆ ಅಡಚಣೆಯಾಗಿದ್ದು, ಮೆಲ್ಕಾರ್ ಟ್ರಾಫಿಕ್ ಠಾಣಾ ಎ.ಎಸ್.ಐ.ಗಳಾದ ಜನಾರ್ಧನ, ಸುರೇಶ್ ಪಡಾರ್ ಮತ್ತು ಸಿಬ್ಬಂದಿ ಅಭಿಷೇಕ್ ಬೇಟಿ ನೀಡಿ ಕ್ರೇನ್ ಬಳಸಿ ಲಾರಿಯನ್ನು ಬದಿಗೆ ಸರಿಸಿ ಮುಕ್ತ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.









