ನೆಲ್ಯಾಡಿ: ಮಕ್ಕಳಲ್ಲಿ ಪೌಷ್ಠಿಕ ಆಹಾರದ ಮಹತ್ವವನ್ನು ಸಾರುವ ಉದ್ದೇಶದಿಂದ ಗೋಳಿತ್ತಟ್ಟು ಶಾಂತಿನಗರ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಆಹಾರೋತ್ಸವ ಕಾರ್ಯಕ್ರಮ ವಿಜ್ರಂಭಣೆಯಿಂದ ನಡೆಯಿತು.
ಶಾಲೆಯ ಮುಖ್ಯ ಅಡುಗೆ ಸಿಬ್ಬಂದಿ ಮೀನಾಕ್ಷಿಯವರು ಕಾರ್ಯಕ್ರಮ ಉದ್ಘಾಟಿಸಿದರು. ಸಹಾಯಕ ಅಡುಗೆ ಸಿಬ್ಬಂದಿ ಭವಾನಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಯಾರಿಸಿಕೊಂಡು ಬಂದಿದ್ದ ವಿವಿಧ ಆಹಾರ ಪದಾರ್ಥಗಳನ್ನು ಪ್ರದರ್ಶಿಸಲಾಯಿತು. ಬಳಿಕ ವಿದ್ಯಾರ್ಥಿಗಳ 10 ತಂಡ ರಚಿಸಿ ಬೆಂಕಿ ರಹಿತ ವಿವಿಧ ಆಹಾರ ವಸ್ತುಗಳನ್ನು ತಯಾರಿಸುವ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ವಿದ್ಯಾರ್ಥಿಗಳು 100ಕ್ಕಿಂತಲೂ ಹೆಚ್ಚು ಪೌಷ್ಠಿಕ ಆಹಾರಗಳನ್ನು ತಯಾರಿಸಿದರು.
ಶಾಲಾ ಮುಖ್ಯಗುರು ಪ್ರದೀಪ್ ಬಾಕಿಲ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಮಂಜುನಾಥ ಮಣಕವಾಡ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಅಂಗನವಾಡಿ ಕಾರ್ಯಕರ್ತೆ ರೀತಾಕ್ಷಿ, ಅಡುಗೆ ಸಹಾಯಕಿ ಶೋಭಾ, ಎಸ್‌ಡಿಎಂಸಿ ಉಪಾಧ್ಯಕ್ಷೆ ಮೀನಾಕ್ಷಿ, ಶಿಕ್ಷಕಿಯರಾದ ತಾರಾ, ಪ್ರಮೀಳಾ, ಸುನಂದಾ, ವೀಕ್ಷಿತಾ, ಎಸ್‌ಡಿಎಂಸಿ ಸದಸ್ಯರು, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.