ಫೆ.23: ಬೆಟ್ಟಂಪಾಡಿ ಶ್ರೀಮಹಾಲಿಂಗೇಶ್ವರ ದೇವಾಲಯದಲ್ಲಿ 11ನೇ ವರ್ಷದ ಪ್ರತಿಷ್ಠಾ ಮಹೋತ್ಸವ, ಸಾಮೂಹಿಕ ಆಶ್ಲೇಷ ಬಲಿ

0

ಪುತ್ತೂರು: ಬೆಟ್ಟಂಪಾಡಿ ಶ್ರೀಮಹಾಲಿಂಗೇಶ್ವರ ದೇವಾಲಯದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಫೆ.23ರಂದು 11ನೇ ವರ್ಷದ ಪ್ರತಿಷ್ಠಾ ಮಹೋತ್ಸವ, ಸಾಮೂಹಿಕ ಆಶ್ಲೇಷ ಬಲಿ ಸೇವೆ ನಡೆಯಲಿದೆ.

ಫೆ.22ರಂದು ಬೆಳಿಗ್ಗೆ ಬಲಿವಾಡು ಶೇಖರಣೆ, ಫೆ.23ರಂದು ಬೆಳಿಗ್ಗೆ 8.30ರಿಂದ ದ್ವಾದಶ ನಾರಿಕೇಳ ಗಣಪತಿ ಹವನ, ಏಕಾದಶ ರುದ್ರಾಭಿಷೇಕ, ಶ್ರೀದೇವರಿಗೆ, ಪರಿವಾರ ದೇವರಿಗೆ, ದೈವಗಳಿಗೆ, ನಾಗದೇವರಿಗೆ ಕಲಶಾಭಿಷೇಕ, ಸಾಮೂಹಿಕ ಆಶ್ಲೇಷ ಬಲಿ ಸೇವೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here