ಮಾ.2: ಬೆಳ್ತಂಗಡಿಯಲ್ಲಿ ನೋವಾ ಐವಿಎಫ್ ಫರ್ಟಿಲಿಟಿಯಿಂದ ಉಚಿತ ಬಂಜೆತನ ನಿವಾರಣಾ ಶಿಬಿರ

0

ಪುತ್ತೂರು: ನೋವಾ ಐವಿಎಫ್ ಫರ್ಟಿಲಿಟಿ ಇದರ ವತಿಯಿಂದ ಅಂತರಾಷ್ಟ್ರೀಯ ರೋಟರಿ ಜಿಲ್ಲೆ 3181, ವಲಯ ನಾಲ್ಕರ ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳ್ತಂಗಡಿ ಇದರ ಸಹಯೋಗದಲ್ಲಿ ಬಂಜೆತನದ ಬಗ್ಗೆ ಉಚಿತ ಮಾಹಿತಿ ಮತ್ತು ಸಮಾಲೋಚನಾ ಶಿಬಿರವು ಮಾ.2ರಂದು ಬೆಳ್ತಂಗಡಿ ಉಜಿರೆ ಕಾಶಿಬೆಟ್ಟು ರೋಟರಿ ಸೇವಾ ಭವನ ಅರಳಿ ರೋಡ್ ನಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಜರಗಲಿದೆ.

ಬಂಜೆತನ ಎನ್ನುವುದು ಚಿಕಿತ್ಸೆ ನೀಡಬಹುದಾದ ಮತ್ತೊಂದು ವಿಧದ ಚಿಕಿತ್ಸೆಯಾಗಿದ್ದು ಈ ಬಂಜೆತನ ತಜ್ಞರೊಂದಿಗೆ ಫಲಾನುಭವಿಗಳು ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ. ಒಂದು ವರ್ಷಕ್ಕಿಂತ ಹೆಚ್ಚಿನ ಸಮಯ ಗರ್ಭಧರಿಸಲು ಪ್ರಯತ್ನಿಸುತ್ತಿದ್ದರೆ, ಅನೇಕ ಬಾರಿ ಗರ್ಭಪಾತವಾಗಿದ್ದರೆ, ಅನೇಕ ಬಾರಿ ಐಯುಐ ಅಥವಾ ಐವಿಎಫ್ ವೈಫಲ್ಯತೆ ಹೊಂದಿದ್ದರೆ, ವರದಿಗಳು ಸಾಮಾನ್ಯವಾಗಿದ್ದರೂ ಗರ್ಭಧರಿಸಲು ಅಸಾಧ್ಯವಾಗಿದ್ದರೆ, ವೀರ್ಯಾಣುಗಳ ಸಂಖ್ಯೆ ಕಡಿಮೆ ಇರುವುದು ಅಥವಾ ವೀರ್ಯಾಣು ಇಲ್ಲದಿರುವುದು, ಪಿಸಿಒಎಸ್ ಸಮಸ್ಯೆ, ಫೆಲೋಪಿಯನ್ ನಾಳದಲ್ಲಿ ಅಡಚಣೆ, ಎಂಡೋಮಿಟ್ರಿಯಾಸಿಸ್ ಅಥವಾ ಗರ್ಭಾಶಯದ ಫೈಬ್ರಾಯ್ಡ್ ನಂತಹ ಸಮಸ್ಯೆಯಿದ್ದವರು ಸಂಪರ್ಕಿಸಬಹುದು.

ನೋವಾ ಐವಿಎಫ್ ಫರ್ಟಿಲಿಟಿ ಇದರ ತಜ್ಞೆ ಡಾ.ಶವೀಝ್ ಫೈಝಿರವರು ಫಲಾನುಭವಿಗಳಿಗೆ ಸೂಕ್ತ ಸಲಹೆ-ಸೂಚನೆಗಳನ್ನು ನೀಡಲಿರುವರು. ಹೆಚ್ಚಿನ ಮಾಹಿತಿಗಾಗಿ ಹಾಗೂ ಅಪಾಯಿಂಟ್ಮೆಂಟ್ ಗಾಗಿ 8867575770 ನಂಬರಿಗೆ ಕರೆ ಮಾಡಬಹುದು ಎಂದು ನೋವಾ ಐವಿಎಫ್ ಫರ್ಟಿಲಿಟಿ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here