ಪುತ್ತೂರು: ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವರಿಗೆ ಬ್ರಹ್ಮಕಲಶಾಭಿಷೇಕ ಗುರುವಾರ ನಡೆಯಿತು. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿ ಮತ್ತು ಕಾರ್ತಿಕ ತಂತ್ರಿಯವರ ನೇತೃತ್ವದಲ್ಲಿ ಬೆಳಿಗ್ಗೆ ಮಹಾಗಣಪತಿ ಹೋಮ, ಗಂಟೆ 7.48ರಿಂದ 8.37ರ ಮೀನಲಗ್ನ ಸುಮುಹೂರ್ತದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರಿಗೆ ಬ್ರಹ್ಮಕಲಶಾಭಿಷೇಕ ನಡೆಯಿತು.
ಮಧ್ಯಾಹ್ನ ಮಹಾಪೂಜೆ, ಶ್ರೀ ಭೂತ ಬಲಿ, ,ವೈದಿಕ ಮಂತ್ರಾಕ್ಷತೆ ಪ್ರಸಾದ ವಿತರಣೆ ನಡೆಯಿತು. ಇದೇ ವೇಳೆ ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ ಮತ್ತು ಬೆಳಂದೂರು ವಿಷ್ಣು ಪ್ರಿಯ ಮಹಿಳಾ ಭಜನಾ ಮಂಡಳಿ ವತಿಯಿಂದ ಭಜನೆ ಸೇವೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷ ,ಮುಂಬೈ ಕಾರ್ದಾಂಟು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಧರ್ಮದರ್ಶಿ ಪುರುಷೋತ್ತಮ ಭಟ್,ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ, ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ನಳೀಲು, ಉಪಾಧ್ಯಕ್ಷರಾದ ವಿಲಾಸ್ ರೈ ಪಾಲ್ತಾಡು, ನಾರಾಯಣ ರೈ ಮೊದೆಲ್ಕಾಡಿ, ಚಂದ್ರಶೇಖರ ರೈ ನಳೀಲು,ವಿನೋದ್ ರೈ ಪಾಲ್ತಾಡು, ಕಿಶೋರ್ ಕುಮಾರ್ ರೈ ನಳೀಲು, ಸಂಜೀವ ಗೌಡ ಪಾಲ್ತಾಡಿ, ರಘುನಾಥ ರೈ ನಡುಕೂಟೇಲು, ಪ್ರಧಾನ ಕಾರ್ಯದರ್ಶಿ ಸುರೇಶ್ಚಂದ್ರ ರೈ ಪಾಲ್ತಾಡಿ, ಕಾರ್ಯದರ್ಶಿ ಪ್ರವೀಣ್ ಕುಮಾರ್ ರೈ ನಳೀಲು, ಜತೆ ಕಾರ್ಯದರ್ಶಿ ಡಾ.ಶುಭ್ದೀಪ್ ರೈ ಕೋಲ್ಪೆಗುತ್ತು, ಖಜಾಂಚಿ ಡಾ.ಸುಚೇತಾ ಜೆ.ಶೆಟ್ಟಿ ,ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಅರುಣ್ ಕುಮಾರ್ ರೈ ನಳೀಲು, ಪ್ರಧಾನ ಕಾರ್ಯದರ್ಶಿ ಸತೀಶ್ ರೈ ನಳೀಲು, ಖಜಾಂಚಿ ಮೋಹನದಾಸ ರೈ ನಳೀಲು ಹಾಗೂ ವಿವಿಧ ಸಮಿತಿ ಪದಾಧಿಕಾರಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.