





ಕಾಣಿಯೂರು: ಸುಳ್ಯ ಬಿಜೆಪಿ ಮಂಡಲ ಸಮಿತಿ ಕಾರ್ಯದರ್ಶಿಯಾಗಿ ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕರವರು ಆಯ್ಕೆಯಾಗಿದ್ದಾರೆ. ಸವಣೂರು ಬಿಜೆಪಿ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾಗಿರುವ ಇವರು ಕಾಣಿಯೂರು ಗ್ರಾ.ಪಂ. ಉಪಾಧ್ಯಕ್ಷರಾಗಿ, ಹಾಲಿ ಸದಸ್ಯರಾಗಿ, ಕಾಣಿಯೂರು ವರ್ತಕರ ಸಂಘದ ಅಧ್ಯಕ್ಷರಾಗಿ, ಕಾಣಿಯೂರು ಕಣ್ವರ್ಷಿ ಆಟೋ ರಿಕ್ಷಾ ಚಾಲಕ ಮಾಲಕ ಸಂಘದ ಗೌರವಾಧ್ಯಕ್ಷರಾಗಿ, ಪುಣ್ಚತ್ತಾರು ಶ್ರೀ ಹರಿ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಗೌರವಾಧ್ಯಕ್ಷರಾಗಿ, ಪುತ್ತೂರು ಪಿ.ಎಲ್.ಡಿ ಬ್ಯಾಂಕ್ ಮಾಜಿ ನಿರ್ದೇಶಕರಾಗಿ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.











