ಕಾಣಿಯೂರು: ಮಂಗಳೂರಿನಲ್ಲಿ ನ್ಯಾಯವಾದಿಯಾಗಿ ವಕೀಲ ವೃತ್ತಿ ನಡೆಸುತ್ತಿರುವ ಗೀತಾ ಡಿ. ಅವರು 2023ನೇ ನವೆಂಬರ್ ತಿಂಗಳಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯ ನಡೆಸಿದ ಸಿವಿಲ್ ನ್ಯಾಯಾಧೀಶರ ಆಯ್ಕೆಯ ಪರೀಕ್ಷೆಯಲ್ಲಿ ತೇರ್ಗಡೆಗೊಂಡು ನಂತರ ನಡೆದ ಮೌಖಿಕ ಪರೀಕ್ಷೆಯಲ್ಲೂ ಕೂಡಾ ಉತ್ತೀರ್ಣರಾಗಿ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ.
ಕರ್ನಾಟಕ ಉಚ್ಚ ನ್ಯಾಯಾಲಯ ದಿನಾಂಕ 23.2.2024ರಂದು ಫಲಿತಾಂಶ ಸುತ್ತೋಲೆಯನ್ನು ಹೊರಡಿಸಿದ್ದು, ಅದರಂತೆ ಗೀತಾ ಡಿ. ಅವರು ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿರುತ್ತಾರೆ. ಗೀತಾರವರು ತಮ್ಮ ಪದವಿ ಶಿಕ್ಷಣವನ್ನು ಮೂಡಬಿದ್ರೆಯ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ಪಡೆದು ನಂತರ ಕಾನೂನು ವಿದ್ಯಾಭ್ಯಾಸವನ್ನು ಮಂಗಳೂರಿನ ಎಸ್.ಡಿ.ಎಂ. ಕಾನೂನು ಕಾಲೇಜಿನಲ್ಲಿ ಪಡೆದು ನಂತರ ತನ್ನ ವಕೀಲ ವೃತ್ತಿಯನ್ನು ಮಂಗಳೂರಿನ ವಕೀಲರಾದ ಮಯೂರ ಕೀರ್ತಿ ಹಾಗೂ ಶರತ್ ಕುಮಾರ್ ಬಿ. ಅವರ ಕಚೇರಿಯಲ್ಲಿ ಕಿರಿಯ ವಕೀಲರಾಗಿ ವೃತ್ತಿ ಆರಂಭಿಸಿ ತಮ್ಮ ವೃತ್ತಿಯನ್ನು ಮುಂದುವರಿಸುತ್ತಾ ಬಂದಿರುತ್ತಾರೆ. ನಂತರ ಗೀತಾ ಡಿ. ರವರು ವಕೀಲರಾದ ಕಾರ್ತಿಕ್ ಮಾಚಿಲ ಅವರನ್ನು ವಿವಾಹವಾಗಿದ್ದು ತಮ್ಮ ವೃತ್ತಿಯನ್ನು ಮುಂದುವರಿಸುತ್ತಾ ಬಂದಿರುತ್ತಾರೆ. ಗೀತಾ ಡಿ. ಅವರು ಚಿಕ್ಕಮಗಳೂರಿನಲ್ಲಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯದಲ್ಲಿ ಜಡ್ಜ್ ಆಗಿ ನಿವೃತ್ತರಾಗಿದ್ದ ಡಿ. ಕೊಂಬೇಗೌಡ ಹಾಗೂ ಕೋಮಲ ಅವರ ಪುತ್ರಿ.