ಉಪ್ಪಿನಂಗಡಿ: ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೆ, ಮಖೆ ಜಾತ್ರೆ ಮತ್ತು ಉತ್ಸವಾದಿಗಳು ವೇ.ಮೂ.ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಪವಿತ್ರಪಾಣಿ ಶ್ರೀ ಕರಾಯ ವಿಷ್ಣುಮೂರ್ತಿ ಕುದ್ದಣ್ಣಾಯರ ಉಪಸ್ಥಿತಿಯಲ್ಲಿ ಫೆ.21ರಿಂದ ಆರಂಭವಾಗಿದ್ದು, ಮಾ.3ರಂದು ಅಷ್ಟಮಿ 2ನೇ ಮಖೆಕೂಟ ನಡೆಯಲಿದೆ.
ಅಂದು ರಾತ್ರಿ 8:30ರಿಂದ ಬಲಿ ಹೊರಟು ಉತ್ಸವ, ರಥೋತ್ಸವ, ಬಲಿ, ಮಹಾಪೂಜೆ ನಡೆಯಲಿದೆ. ಮಾ.4ರಂದು ಪ್ರಾತಃಕಾಲದಲ್ಲಿ ತೀರ್ಥಸ್ನಾನ ನಡೆಯಲಿದ್ದು, ಬೆಳಗ್ಗೆ 7:3೦ರಿಂದ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಶ್ರೀ ಮಹಾಕಾಳಿ ಅಮ್ಮನವರ ನೇಮಕ್ಕೆ ಪಡಿಯಕ್ಕಿ ಕೊಡುವುದು, ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಮಾ.8ರಂದು ಮಹಾಶಿವರಾತ್ರಿ 3ನೇ ಮಖೆಕೂಟ ನಡೆಯಲಿದ್ದು, ರಾತ್ರಿ 8ರಿಂದ ಬಲಿ ಹೊರಟು ಉತ್ಸವ, ಮಹಾಪೂಜೆ ನಡೆಯಲಿದೆ. ಮಾ.9ರಂದು ಪ್ರಾತಃಕಾಲದಲ್ಲಿ ತೀರ್ಥಸ್ನಾನ ನಡೆಯಲಿದ್ದು, ಬೆಳಗ್ಗೆ 6:3೦ರಿಂದ ಬಲಿ ಹೊರಟು ರಥೋತ್ಸವ, ಉತ್ಸವ, ದರ್ಶನಬಲಿ, ಬಟ್ಟಲು ಕಾಣಿಕೆ, ಶ್ರೀ ಮಹಾಕಾಳಿ ಅಮ್ಮನವರ ನೇಮಕ್ಕೆ ಪಡಿಯಕ್ಕಿ ಕೊಡುವುದು, ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಮಾ.15ರಂದು ರಾತ್ರಿ ಮಹಾಕಾಳಿ ಮೆಚ್ಚಿ ನಡೆಯಲಿದ್ದು, ರಾತ್ರಿ 9ರಿಂದ ಅನ್ನಸಂತರ್ಪಣೆ ನಡೆಯಲಿದೆ. ಮಾ.19ರಂದು ರಾತ್ರಿ 8ಕ್ಕೆ ಕದಿಕ್ಕಾರು ಬೀಡಿನಿಂದ ಭಂಡಾರ ಬಂದು ದೇವಾಲಯದ ಸಂತೆಮಜಲಿನಲ್ಲಿ ದೊಂಪದ ಬಲಿ ನೇಮೋತ್ಸವ ನಡೆಯಲಿದೆ.
ಸಾಂಸ್ಕೃತಿಕ ಕಾರ್ಯಕ್ರಮಗಳು: ಮಾ.3ರಂದು ರಾತ್ರಿ 8ರಿಂದ 10ರವರೆಗೆ ಸ್ವರ ಸಿಂಚನ ಸುಗಮ ಸಾಹಿತ್ಯ ಬಳಗ, ಸುಳ್ಯ ಇವರಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದ್ದು, ರಾತ್ರಿ 10:30ರಿಂದ 2ರವರೆಗೆ ಗಯಾಪದ ಕಲಾವಿದೆರ್ ಉಬಾರ್ ಇವರಿಂದ ಮುರಳಿ ಈ ಪಿರ ಬರೊಲಿ’ ತುಳು ಹಾಸ್ಯಮಯ ನಾಟಕ ನಡೆಯಲಿದೆ. ಮಾ.೮ರಂದು ರಾತ್ರಿ ೮ರಿಂದ ೧೦ರವರೆಗೆ ಹಂಸಧ್ವನಿ ಮೆಲೋಡಿಸ್ ಉಪ್ಪಿನಂಗಡಿ ಇವರಿಂದ ಕೆರೋಕೆ ಭಕ್ತಿ ರಸಮಂಜರಿ ಕಾರ್ಯಕ್ರಮ ನಡೆಯಲಿದೆ. ರಾತ್ರಿ 10:30ರಿಂದ ಬೆಳಗ್ಗೆ 4:30ರವರೆಗೆ ಯಕ್ಷನಂದನ ಕಲಾ ಸಂಘ ಗೋಕುಲನಗರ ಹಾಗೂ ಜಿಲ್ಲೆಯ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿರುಕ್ಯಾಂಗದ ಚರಿತ್ರೆ’ ಯಕ್ಷಗಾನ ನಡೆಯಲಿದೆ. ಮಾ.15ರಂದು ರಾತ್ರಿ 8:30ರಿಂದ 10:30ರವರೆಗೆ ಕೃತಿ ಕೈಲಾರ್ ಮತ್ತು ಬಳಗದವರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀ ದೇವಾಲಯದ ಪ್ರಕಟಣೆ ತಿಳಿಸಿದೆ.