ಬ್ರಹ್ಮಶ್ರೀ ಮಿತ್ತೂರು ಪುರೋಹಿತ ತಿಮ್ಮಯ್ಯ ಸಂಪ್ರತಿಷ್ಠಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅನುದಾನ ಬಿಡುಗಡೆ

0

ವಿಟ್ಲ: ಬ್ರಹ್ಮಶ್ರೀ ಮಿತ್ತೂರು ಪುರೋಹಿತ ತಿಮ್ಮಯ್ಯ ಸಂಪ್ರತಿಷ್ಠಾನದ ವತಿಯಿಂದ ನೂತನವಾಗಿ ನಿರ್ಮಿಸುತ್ತಿರುವ ಗ್ರಂಥಾಲಯ ಮತ್ತು ಸಭಾಭವನದ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಐದು ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆ 2 ರ ನಿರ್ದೇಶಕರಾದ ಪ್ರವೀಣ್ ಕುಮಾರ್ ರವರು ಚಕ್ ಅನ್ನು ವಿತರಣೆ ಮಾಡಿದರು.


ಜನಜಾಗೃತಿ ವಲಯಾಧ್ಯಕ್ಷರಾದ ಪಿ. ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ಸಂಪ್ರತಿಷ್ಠಾನದ ಅಧ್ಯಕ್ಷರಾದ ರಮೇಶ್ ಭಟ್ ಬಿ., ಕಾರ್ಯದರ್ಶಿ ರಮೇಶ್ ಭಟ್ ಎಂ ಹೆಚ್ , ವಿಟ್ಲ ತಾಲೂಕು ಯೋಜನಾಧಿಕಾರಿ ಚೆನ್ನಪ್ಪ ಗೌಡ, ಮಾಣಿ ವಲಯ ಮೇಲ್ವಿಚಾರಕಿ ಆಶಾಪಾರ್ವತಿ, ಸೇವಾಪ್ರತಿನಿಧಿ ಸುಗಂಧಿನಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here