ಪುತ್ತೂರು ಎಪಿಎಂಸಿ ಸಹಾಯಕ ಕಾರ್ಯದರ್ಶಿ ರಾಮಚಂದ್ರ ಅವರಿಗೆ ವರ್ಗಾವಣೆ

0

ಪುತ್ತೂರು: ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಇದರ ಸಹಾಯಕ ಕಾರ್ಯದರ್ಶಿ ಕಾರ್ಯವೈಖರಿ ಕುರಿತು ಎಪಿಎಂಸಿ ವರ್ತಕರು ಸಲ್ಲಿಸಿರುವ ದೂರಿನ ಮೇರೆಗೆ ಇಲಾಖಾ ವಿಚಾರಣೆ ನಡೆಸಲು ಆಡಳಿತಾತ್ಮಕ ಹಿತದೃಷ್ಟಿಯಿಂದ ಸಹಾಯಕ ಕಾರ್ಯದರ್ಶಿ ರಾಮಚಂದ್ರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ರಾಯಚೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಖಾಲಿ ಇರುವ ಹಿರಿಯ ಮಾರುಕಟ್ಟೆ ಮೇಲ್ವಿಚಾರಕ ಹುದ್ದೆಗೆ ವರ್ಗಾಯಿಸಿ ಕೃಷಿ ಮಾರಾಟ ಇಲಾಖೆ ಆದೇಶ ಹೊರಡಿಸಿದೆ. ಆದೇಶದಲ್ಲಿ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ, ಕೇಂದ್ರ ಕಚೇರಿಗೆ ವರದಿಯನ್ನು ಸಲ್ಲಿಸಲು ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿಗೆ ಸೂಚಿಸಲಾಗಿದೆ.

LEAVE A REPLY

Please enter your comment!
Please enter your name here