ನಿಡ್ಪಳ್ಳಿ: ಇರ್ದೆ ಉಪ್ಪಳಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆ.28 ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು ಎಸ್ ಡಿ ಎಂ ಸಿ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ನಡೆಯಿತು.
ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾಶ್ರೀ ಸರೋಲಿಕಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಲೋಕನಾಥ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಸದಸ್ಯ ಪ್ರಕಾಶ್ ರೈ ಬೈಲಾಡಿ, ಎಸ್ ಡಿ ಎಂ ಸಿ ತರಬೇತಿಗೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಲಿಟ್ಲ್ ಫ್ಲವರ್ ಶಾಲಾ ಶಿಕ್ಷಕ ಬಾಲಕೃಷ್ಣ ಪೊರ್ದಾಲ್, ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಯಶೋದಾ, ಶಾಲಾ ಮುಖ್ಯಗುರು ಲಿಂಗಮ್ಮ ಉಪಸ್ಥಿತರಿದ್ದರು.
ವಿಜ್ಞಾನ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಂದ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಪ್ರಯೋಗಗಳು ನಡೆದವು. ದಿನದ ವಿಶೇಷತೆಯ ಬಗ್ಗೆ ಸಹಶಿಕ್ಷಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯಗುರು ಲಿಂಗಮ್ಮ ಸ್ವಾಗತಿಸಿ, ವಿಜ್ಞಾನ ದಿನಾಚರಣೆಯ ಪ್ರತಿಜ್ಞಾ ವಿಧಿ ಬೋಧಿಸಿದರು. ನಂತರ ಸಂಪನ್ಮೂಲ ವ್ಯಕ್ತಿ ಬಾಲಕೃಷ್ಣ ಪೊರ್ದಲ್ ಎಸ್ ಡಿ ಎಂ ಸಿ ಸದಸ್ಯರಿಗೆ ತರಬೇತಿ ನೀಡಿದರು. ಸಹ ಶಿಕ್ಷಕಿ ಪಾರ್ವತಿ ವಂದಿಸಿ, ಶೃತಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರಾದ ಪುಷ್ಪಾವತಿ, ವಾಣಿಶ್ರೀ, ಗೀತಾ, ಚೇತನಾ, ಪ್ರತಿಮಾ, ರೇಷ್ಮಾ, ಭಾಗ್ಯಲಕ್ಷ್ಮಿ ಹಾಗೂ ವಿದ್ಯಾರ್ಥಿಗಳು ಸಹಕರಿಸಿದರು. ಮಕ್ಕಳ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.