ಉಪ್ಪಿನಂಗಡಿ ನೆಕ್ಕಿಲಾಡಿಯ ಹರೀಶ್ ನಾಯಕ್ ರವರಿಗೆ ಡಾಕ್ಟರೇಟ್ ಪದವಿ ಪ್ರದಾನ

0

ಆಲಂಕಾರು: ಉಪ್ಪಿನಂಗಡಿ ನೆಕ್ಕಿಲಾಡಿ ಗ್ರಾಮದ ವಿಮಲ ಮತ್ತು ಲಕ್ಷ್ಮಣ ನಾಯಕ್ ರವರ ಪುತ್ರ ಹರೀಶ್ ನಾಯಕ್ ರಿಗೆ ಮೈಸೂರು ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ಪ್ರದಾನ ಮಾಡಿ ಗೌರವಿಸಿದೆ.ಇವರು ಪ್ರಸ್ತುತಪಡಿಸಿದ ಭಾರತದಲ್ಲಿ ಆರೋಗ್ಯ ಪ್ರವಾಸೋದ್ಯಮದ ಮೌಲ್ಯಮಾಪನ ಎಂಬ ಸಂಶೋಧನ ವಿಷಯಕ್ಕೆ ಪಿ.ಎಚ್.ಡಿ ಪದವಿ ಲಭಿಸಿದೆ.

ಇವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಸರಕಾರಿ ಹೈಸ್ಕೂಲ್, ಉಪ್ಪಿನಂಗಡಿ, ಸರಕಾರಿ ಪದವಿಪೂರ್ವ ಕಾಲೇಜು, ಸರಕಾರಿ ಪದವಿ ಕಾಲೇಜು ಉಪ್ಪಿನಂಗಡಿಯಲ್ಲಿ ಶಿಕ್ಷಣ ಪಡೆದು ಎಂ.ಕಾಂ ಶಿಕ್ಷಣ ವನ್ನು ಮಂಗಳೂರು ವಿಶ್ವವಿದ್ಯಾಲಯ, ಎಂ.ಫಿಲ್.ದ್ರಾವಿಡ ವಿಶ್ವವಿದ್ಯಾಲಯ, ಕುಪ್ಪಂ ಶಿಕ್ಷಣ ವನ್ನು ಮುಗಿಸಿರುತ್ತಾರೆ. ಪಿಎಚ್.ಡಿಯನ್ನು ಮೈಸೂರು ವಿಶ್ವವಿದ್ಯಾನಿಲಯ. ವಿವಿಧ ಕಾಲೇಜುಗಳಲ್ಲಿ 20 ವರ್ಷಗಳ ಬೋಧನೆ ಮತ್ತು ಆಡಳಿತದ ಅನುಭವ. ಸರ್ಕಾರದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕೆಲಸ ಮಾಡಿ 2023 ರಲ್ಲಿ ಪ್ರಥಮ ದರ್ಜೆ ಕಾಲೇಜು, ಉಪ್ಪಿನಂಗಡಿಯಲ್ಲಿ ನಂತರ ಬೆಂಗಳೂರಿನ ಎಸ್‌ಎನ್‌ಆರ್ ಪದವಿ ಕಾಲೇಜಿನ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ . 2 ವರ್ಷಗಳ ಕಾಲ ಬೆಂಗಳೂರು ವಿಶ್ವವಿದ್ಯಾಲಯದ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ಸೇವೆ ಸಲ್ಲಿಸಿ, ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಸಂಯೋಜಿತವಾಗಿರುವ 13 ಕಾಲೇಜುಗಳ ಆಡಳಿತ ಮಂಡಳಿ ಸದಸ್ಯರಾಗಿ ,
2022-2023 ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.


ಮಾ .3 ರಂದು ಮೈಸೂರು ವಿಶ್ವವಿದ್ಯಾನಿಲಯದ 104ನೇ ಘಟಿಕೋತ್ಸವದಲ್ಲಿ ಕರ್ನಾಟಕದ ರಾಜ್ಯಪಾಲರು ಹಾಗೂ ಕರ್ನಾಟಕ ವಿಶ್ವವಿದ್ಯಾನಿಲಯಗಳ ಕುಲಾಧಿಪತಿ ಥಾವರ್ ಚಂದ್ ಗೆಹ್ಲೋಟ್ ಹರೀಶ್ ನಾಯಕ್ ರವರಿಗೆ ಪದವಿ ಪ್ರದಾನ ಮಾಡಿದರು.
ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ. ಸಿ.ಸುಧಾಕರ್, ಜಯದೇವ ನಿವೃತ್ತ ನಿರ್ದೇಶಕರಾದ ಡಾ. ಸಿ ಎನ್ ಮಂಜುನಾಥ್, ಕುಲಪತಿ ಎನ್. ಕೆ ಲೋಕನಾಥ್ ಕುಲಸಚಿವ ಪ್ರೊ. ಕೆ. ಎಮ್. ಮಹಾದೇವನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here