ಇಂದ್ರಪ್ರಸ್ಥದಲ್ಲಿ ದೀಪ ಪ್ರದಾನ ಕಾರ್ಯಕ್ರಮ

0

ಉಪ್ಪಿನಂಗಡಿ: ಇಲ್ಲಿನ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ 2023-24ನೇ ಶೈಕ್ಷಣಿಕ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ದೀಪ ಪ್ರದಾನ ಕಾರ್ಯಕ್ರಮ ಮಾ.6ರಂದು ನಡೆಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ ವಿವೆಕಾನಂದ ಕಾಲೇಜಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಹರೀಶ ಶಾಸ್ತ್ರಿ ಮಾತನಾಡಿ, ವಿದ್ಯಾರ್ಥಿಗಳು ಎಷ್ಟೇ ಎತ್ತರದ ಸ್ಥಾನಕ್ಕೆ ಏರಿದರೂ ಕಲಿತ ಸಂಸ್ಥೆಯನ್ನು ಕಲಿಸಿದ ಗುರುಗಳನ್ನು ಎಂದಿಗೂ ಮರೆಯಬಾರದು. ಜೀವನದಲ್ಲಿ ದೊರೆತ ಅವಕಾಶಗಳನ್ನು ಬಳಸಿಕೊಂಡು ಯಶಸ್ಸನ್ನು ಸಾಧಿಸಬೇಕು ಎಂದರು.

ಇಂದ್ರಪ್ರಸ್ಥ ವಿದ್ಯಾ ಸಂಸ್ಥೆಗಳ ಸಂಚಾಲಕ ಯು.ಜಿ. ರಾಧಾ, ಮುಖ್ಯ ಶಿಕ್ಷಕಿ ವೀಣಾ ಆರ್. ಪ್ರಸಾದ್, ಸಹ ಶಿಕ್ಷಕರುಗಳಾದ ರೇಣುಕಾ ಹಾಗೂ ಯಶ ಕುಮಾರಿ ಮಾತನಾಡಿ ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಜೀವನಕ್ಕೆ ಶುಭ ಹಾರೈಸಿದರು. 10ನೇ ತರಗತಿಯ ವಿದ್ಯಾರ್ಥಿಗಳು ಸಂಸ್ಥೆಯಲ್ಲಿ ತಾವು ಕಳೆದ ಸವಿ ನೆನಪನ್ನು ಮೆಲುಕು ಹಾಕಿದರು.
ಈ ಸಂದರ್ಭದಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳು ಜ್ಞಾನದ ಸಂಕೇತವಾದ ದೀಪವನ್ನು ಕಿರಿಯ ವಿದ್ಯಾರ್ಥಿಗಳಿಗೆ ನೀಡುವ ಮೂಲಕ ಸಂಸ್ಥೆಯ ಘನತೆ ಗೌರವವನ್ನು ಹೆಚ್ಚಿಸುವ ಜವಾಬ್ದಾರಿಯನ್ನು ಹಸ್ತಾಂತರಿಸಿದರು. ಜೊತೆಗೆ ತಮ್ಮ ಸವಿನೆನಪಿಗಾಗಿ ಕೊಡುಗೆಗಳನ್ನು ಸಂಸ್ಥೆಗೆ ನೀಡಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ- ಶಿಕ್ಷಕೇತರ ವೃಂದದವರು ಹಾಗೂ ಪಾಲಕರು ಉಪಸ್ಥಿತರಿದ್ದರು. 9ನೇ ತರಗತಿಯ ವಿದ್ಯಾರ್ಥಿಗಳು ಈ ಕಾರ್ಯಕ್ರಮ ನಡೆಸಿಕೊಟ್ಟರು.

LEAVE A REPLY

Please enter your comment!
Please enter your name here