ನಿಡ್ಪಳ್ಳಿ: ಶ್ರೀ ಶಾಂತದುರ್ಗಾ ದೇವಸ್ಥಾನ ಶ್ರೀ ಕ್ಷೇತ್ರ ನಿಡ್ಪಳ್ಳಿ ಇಲ್ಲಿಯ ಆರಾಧ್ಯ ಮೂರ್ತಿ ಶ್ರೀ ಶಾಂತದುರ್ಗಾ ದೇವಿಯ ಪ್ರತಿಷ್ಠಾ ಉತ್ಸವ ಹಾಗೂ ಜಾತ್ರೋತ್ಸವ ಕಾರ್ಯಕ್ರಮ ಮಾ.13 ರಂದು ಕ್ಷೇತ್ರದ ತಂತ್ರಿ ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿಗಳ ನೇತೃತ್ವದಲ್ಲಿ ಜರಗಲಿದೆ.
ಮಾ.12 ರಂದು ಮಂಗಳವಾರ ಬೆಳಿಗ್ಗೆ ಗಂಟೆ 10ರಿಂದ ಬಲಿವಾಡು ಶೇಖರಣೆ ಹಾಗೂ ಹಸಿರುವಾಣಿ ಶೇಖರಣೆ, ಮಾ.13 ರಂದು ಬೆಳಿಗ್ಗೆ ಗಂಟೆ 9 ರಿಂದ ಪ್ರಾರ್ಥನೆ, ಗಣಪತಿ ಹೋಮ ಶ್ರೀ ದೇವರಿಗೆ ಪಂಚವಿಂಶತಿ ಕಲಶ, ಗಂಟೆ 11 ರಿಂದ ಶ್ರೀ ಶಾಂತದುರ್ಗಾ ಕುಣಿತ ಭಜನಾ ತಂಡ ನಿಡ್ಪಳ್ಳಿ ಇವರಿಂದ ಕುಣಿತ ಭಜನೆ, ಮಧ್ಯಾಹ್ನ ಗಂಟೆ 12.30 ಕ್ಕೆ ಮಹಾಪೂಜೆ, ಪಲ್ಲಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ ಗಂಟೆ 7 ರಿಂದ ಪೂಜೆ ಪ್ರಸಾದ ವಿತರಣೆ ನಡೆಯಲಿದ್ದು, ನಂತರ ಭೂತ ಬಲಿ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ ಶ್ರೀ ದೇವರ ಗರ್ಭಗೃಹ ಪ್ರವೇಶ ಮಂತ್ರಾಕ್ಷತೆ, ಮಹಾ ಅನ್ನಸಂತರ್ಪಣೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿಯವರು ತಿಳಿಸಿದ್ದಾರೆ.