ಸವಣೂರಿನಲ್ಲಿ ಕಡಬ ತಾಲೂಕು ತುಳು ಸಾಹಿತ್ಯ ಸಮ್ಮೇಳನ-ಪೂರ್ವಭಾವಿ ಸಭೆ

0

2024 ಮೇ ತಿಂಗಳಲ್ಲಿ ಅದ್ದೂರಿ ಕಾರ್ಯಕ್ರಮ, ತಾಲೂಕು ಮಟ್ಟದ ಸ್ಪರ್ಧೆ, ಸ್ಮರಣ ಸಂಚಿಕೆ ಬಿಡುಗಡೆ

ಪುತ್ತೂರು: ಕಡಬ ತಾಲೂಕು ಪ್ರಪ್ರಥಮ ತುಳು ಸಾಹಿತ್ಯ ಸಮ್ಮೇಳನವನ್ನು ಸವಣೂರಿನಲ್ಲಿ ನಡೆಸಲು ರಾಜ್ಯ ಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲದ ಸಹ ಸಂಸ್ಥೆಯಾಗಿರುವ ಸವಣೂರು ಬೊಳ್ಳಿ ಬೊಲ್ಪು ತುಳುಕೂಟ ಸಂಸ್ಥೆಯು ತಯಾರಿ ನಡೆಸುತ್ತಿದ್ದು, ಮೇ ತಿಂಗಳ ಕೊನೆಯ ವಾರ ಸವಣೂರು ಉನ್ನತ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಕಾರ‍್ಯಕ್ರಮ ಆಯೋಜನೆಯಾಗಲಿದೆ. ಸವಣೂರು ಬೊಳ್ಳಿ ಬೊಲ್ಪು ತುಳುಕೂಟ ಸಂಸ್ಥೆಯ ಸ್ಥಾಪಕ ಗೌರವಾಧ್ಯಕ್ಷ ಗಿರಿಶಂಕರ್ ಸುಲಾಯ ದೇವಸ್ಯರವರ ಅಧ್ಯಕ್ಷತೆಯಲ್ಲಿ ಜರಗಿದ ಪೂರ್ವಭಾವಿ ಸಭೆಯಲ್ಲಿ ತುಳು ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣ ರೀತಿಯಲ್ಲಿ ಆಯೋಜನೆ ಮಾಡಲು ತಿರ್ಮಾನ ಕೈಗೊಳ್ಳಲಾಗಿದೆ. ತಾಲೂಕು ಮಟ್ಟದ ಸ್ಪರ್ಧೆ, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ಸನ್ಮಾನ, ಪ್ರಥಮ ತುಳು ಸಮ್ಮೇಳನದ ಸವಿ ನೆನಪಿಗಾಗಿ ವಿಶೇಷ ಸಂಚಿಕೆ ಹಾಗೂ ಸಾಂಸ್ಕೃತಿಕ ಕಾರ‍್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಸವಣೂರು ಬೊಳ್ಳಿ ಬೊಲ್ಪು ತುಳುಕೂಟದ ಅಧ್ಯಕ್ಷ ಕುಂಜಾಡಿ ಪ್ರಕಾಶ್ಚಂದ್ರ ರೈ ಮುಗೇರುಗುತ್ತು, ದ.ಕ.ಜಿಲ್ಲಾ ಯುವ ಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ಸುಳ್ಯ ವಿಧಾನಸಭಾ ಕ್ಷೇತ್ರದ ಅಕ್ರಮ-ಸಕ್ರಮ ಸಮಿತಿಯ ಮಾಜಿ ಸದಸ್ಯ ರಾಕೇಶ್ ರೈ ಕೆಡೆಂಜಿ, ಸವಣೂರು ಯುವಕ ಮಂಡಲದ ಅಧ್ಯಕ್ಷ ಜಿತಾಕ್ಷ ಜಿ ಕುದ್ಮಾರು, ಅಂಬಾ ಬ್ರದರ‍್ಸ್‌ನ ಬಾಲಚಂದ್ರ ರೈ ಕೆರೆಕೋಡಿ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ, ನಿರ್ದೇಶಕ ಗಂಗಾಧರ್ ಪೆರಿಯಡ್ಕ, ಕಡಬ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ಕೆ. ಸವಣೂರು, ಸವಣೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಶಿವರಾಮ ಗೌಡ ಮೆದು, ಯುವ ಸಂಘಟಕ ರಾಮಕೃಷ್ಣ ಪ್ರಭು, ಸವಣೂರು ಯುವಕ ಮಂಡಲದ ನಿಕಟಪೂರ್ವಧ್ಯಕ್ಷ ಪ್ರಕಾಶ್ ಮಾಲೆತ್ತಾರು, ದಿನೇಶ್ ಕೆ .ಆಚಾರ್ಯರವರುಗಳು ಉಪಸ್ಥಿತರಿದ್ದರು. ಸವಣೂರು ಬೊಳ್ಳಿ ಬೊಲ್ಪು ತುಳುಕೂಟದ ಪ್ರಧಾನ ಕಾರ‍್ಯದರ್ಶಿ ಉಮಾಪ್ರಸಾದ್ ರೈ ನಡುಬೈಲು ಸ್ವಾಗತಿಸಿ, ಕಾರ‍್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here