ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಕಾಂಗ್ರೆಸ್‌ ಕಾರ್ಯಕರ್ತರನ್ನು ಗಡಿಪಾರು ಮಾಡುವಂತೆ ಬಿಜೆಪಿಯಿಂದ ಚುನಾವಣಾ ಕಚೇರಿಗೆ ದೂರು

0

ಪುತ್ತೂರು : ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಟ ಸದಸ್ಯ ಜಯಾನಂದ ಬಂಗೇರ ರವರ ಮನೆ ಅಂಗಳಕ್ಕೆ ಅಕ್ರಮವಾಗಿ ಪ್ರವೇಶಿಸಿ, ಮನೆಯವರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ಮಾಡಿ ಆರೋಪಿಗಳನ್ನು ಗಡಿ ಪಾರು ಮಾಡುವಂತೆ ಆಗ್ರಹಿಸಿ ಪುತ್ತೂರು ಬಿಜೆಪಿ ವತಿಯಿಂದ ಸಹಾಯಕ ಆಯುಕ್ತರಾಗಿರುವ ಸಹಾಯಕ ಚುನಾವಣಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಲಾಯಿತು.


ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ನಡೆಸಿದ ಶಾಸಕರ ಬೆಂಬಲಿಗರಾದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಗಡಿಪಾರು ಆದೇಶ ಹೊರಡಿಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಚುನಾವಣಾ ಸಂಧರ್ಭದಲ್ಲಿ ಪುತ್ತೂರಿನಲ್ಲಿ ಈ ರೀತಿಯ ಘಟನೆಗಳು ಜರಗುವುದು ತಾಲೂಕಿನ ಮತದಾರರಲ್ಲಿ ಹಾಗೂ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರಲ್ಲಿ ಭಯದ ವಾತಾವರಣವನ್ನು ಮೂಡಿಸಿದೆ. ಈ ಪ್ರಕರಣದಲ್ಲಿ ಭಾಗಿಯಾದ ಎಲ್ಲರನ್ನು ಕೂಡಲೇ ಚುನಾವಣೆ ಮುಗಿಯುವ ತನಕ ಗಡಿಪಾರು ಮಾಡಲು ಆದೇಶಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ. ಮಾಜಿ ಶಾಸಕ ಸಂಜೀವ ಮಠಂದೂರು, ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ಜಿಲ್ಲಾ ವಿಭಾಗ ಸಹಪ್ರಮುಖ್ ಗೋಪಾಲಕೃಷ್ಣ ಹೇರಳೆ, ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಈ ವೇಳೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here