ಪುತ್ತೂರು: ಬೆಟ್ಟಂಪಾಡಿ ಬಿಜೆಪಿ ಶಕ್ತಿಕೇಂದ್ರದ ಚುನಾವಣಾ ನಿರ್ವಹಣೆಯ ಪೂರ್ವಭಾವಿ ಸಭೆ ಬೆಟ್ಟಂಪಾಡಿಯಲ್ಲಿ ನಡೆಯಿತು. ಬಿಜೆಪಿ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ ಮಾತನಾಡಿ ದ.ಕ.ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟರವರನ್ನು 4 ಲಕ್ಷಕ್ಕಿಂತಲೂ ಅಧಿಕ ಮತಗಳ ಅಂತರಗಳಿಂದ ಗೆಲ್ಲಿಸಬೇಕು. ಇದುವೇ ನಮ್ಮ ಮುಂದಿನ ಗುರಿ. ಎಲ್ಲಾ ಗೊಂದಲಗಳನ್ನು ಸರಿಪಡಿಸಲಾಗಿದೆ. ಕಾರ್ಯಕರ್ತರೆಲ್ಲರೂ ಒಗ್ಗಟ್ಟಾಗಿ ಕೆಲಸಮಾಡುವುದರ ಮೂಲಕ ನರೇಂದ್ರ ಮೋದಿಯನ್ನು ಮತ್ತೊಮ್ಮೆ ಪ್ರಧಾನಿಯಾಗಿಸಬೇಕು ಎಂದರು.
ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಂಗನಾಥ ರೈ ಗುತ್ತು ಮಾತನಾಡಿ ನಮ್ಮ ಬಿಜೆಪಿ ಅಭ್ಯರ್ಥಿಯನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಲು ನಾವೆಲ್ಲರೂ ಶ್ರಮವಹಿಸೋಣ ಎಂದರು.
ಬಿಜೆಪಿ ಗ್ರಾಮಾಂತರ ಮಂಡಲ ಉಪಾಧ್ಯಕ್ಷ ಜಯರಾಮ ಪೂಜಾರಿ, ಎಸ್ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾಶ್ರೀ, ಜಿ.ಪಂ.ಮಾಜಿ ಸದಸ್ಯೆ ಮೀನಾಕ್ಷಿ ಮಂಜುನಾಥ್, ನ್ಯಾಯವಾದಿ ಶಂಭು ಭಟ್, ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಹೇಶ್ ಕೋರ್ಮಂಡ, ಮಾಜಿ ಅಧ್ಯಕ್ಷ ಸುಂದರ ನಾಯಕ್ ಬಾಳೆಗುಳಿ, ಸದಸ್ಯರುಗಳಾದ ವಿನೋದ್ ಕುಮಾರ್ ರೈ ಗುತ್ತು, ಪ್ರಕಾಶ್ ರೈ ಬೈಲಾಡಿ, ಉಮಾವತಿ ಸುಬ್ಬಪ್ಪ ಮಣಿಯಾಣಿ, ಪಾರ್ವತಿ ಲಿಂಗಪ್ಪ ಗೌಡ, ಗಂಗಾಧರ ಗೌಡ ಮಿತ್ತಡ್ಕ, ರಮ್ಯ ಪಾರ, ಲಲಿತಾ, ಬೇಬಿ ದೂಮಡ್ಕ, ಬೆಟ್ಟಂಪಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅದ್ಯಕ್ಷ ಕರುಣಾಕರ ಶೆಟ್ಟಿ ಕೊಮ್ಮಂಡ, ನಿರ್ದೇಶಕರಾದ ಸೂರ್ಯನಾರಾಯಣ ಭಟ್ ಪಾರ, ಪ್ರಭಾಕರ ರೈ ಬಾಜುವಳ್ಳಿ, ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರುಗಳಾದ ಶೇಷಪ್ಪ ರೈ ಮೂರ್ಕಾಜೆ, ಹರೀಶ್ ಗೌಡ ಗುಮ್ಮಟೆಗದ್ದೆ ಬಿಜೆಪಿ ಬೂತ್ನ ಶಿವಕುಮಾರ್ ಬಲ್ಲಾಳ್ ಬೆಟ್ಟಂಪಾಡಿ ಬೀಡು, ಶಂಕರ ಭಟ್ ಮಜಲುಗುಡ್ಡೆ, ಚಂದ್ರಶೇಖರ ರೈ ಮೊದೆಲ್ಕಾಡಿ, ಮನೋಜ್ ರೈ ಮೋರ್ಕಾಜೆ, ಸಂದೀಪ್ ರೈ ಬಾಜುವಳ್ಳಿ, ಶೇಷನ್ ಪಾರ ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು. ಬೆಟ್ಟಂಪಾಡಿ ಶಕ್ತಿಕೇಂದ್ರದ ಅಧ್ಯಕ್ಷ ಜಗನ್ನಾಥ ರೈ ಕೊಮ್ಮಂಡ ಸ್ವಾಗತಿಸಿ ವಂದಿಸಿದರು.