ಪುತ್ತೂರು: ಸ್ವಿಫ್ಟ್ ಕಾರೊಂದರಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಬಜರಂಗದಳ ಕಾರ್ಯಕರ್ತರು ಮತ್ತು ಸಾರ್ವಜನಿಕರು ಗೋವುಗಳನ್ನು ರಕ್ಷಣೆ ಮಾಡಿದ ಘಟನೆ ಕಬಕ ಕಲ್ಲಂಡ್ಕ ಸಮೀಪ ಮಾ.24 ರ ತಡ ರಾತ್ರಿ ನಡೆದಿದೆ.
ಕಬಕದಿಂದ ಪದ್ಮಡ್ಕ ಕಲ್ಲಂಡ್ಕ ಸಂಪರ್ಕ ರಸ್ತೆಯಲ್ಲಿ ರಾತ್ರಿ ಸ್ವಿಫ್ಟ್ ಕಾರೊಂದರಲ್ಲಿ ಅಕ್ರಮವಾಗಿ ಗೊ ಸಾಗಾಟ ಮಾಡುತ್ತಿರುವ ಕುರಿತು ಸಂಶಯ ವ್ಯಕ್ತವಾಗುತ್ತಿದ್ದಂತೆ ಸಾರ್ವಜನಿಕರು ಕಾರನ್ನು ನಿಲ್ಲಿಸುವಂತೆ ಸೂಚನೆ ನೀಡಿದಾಗ. ಕಾರು ಚಾಲಕ ಕಾರನ್ನು ನಿಲ್ಲಿಸದೆ ವೇಗವಾಗಿ ಕಾರು ಚಲಾಯಿಸಿದ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಚರಂಡಿಗೆ ಬಿತ್ತು. ಈ ವೇಳೆ ಕಾರು ಚಾಲಕ ಹಾಗೂ ಕಾರಿನಲ್ಲಿದ್ದವರು ಕಾರು ಬಿಟ್ಟು ಪರಾರಿಯಾಗಿದ್ದರು. ಕಾರಿನಲ್ಲಿ ಎರಡು ದನ ಹಾಗೂ ಎರಡು ಕರು ಪತ್ತೆಯಾಗಿದ್ದು. ಅವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಟ್ಟಲಾಗಿತ್ತು. ಇದೆ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಜರಂಗದಳದ ಮತ್ತು ಸಾರ್ವಜನಿಕರ ಸಹಕಾರದಿಂದ 4 ಗೋವುಗಳನ್ನು ಮತ್ತು ಜಖಂಗೊಂಡ ವಾಹನವನ್ನು ಪುತ್ತೂರು ನಗರ ಪೊಲೀಸರು ಠಾಣೆಗೆ ಕೊಂಡೊಯ್ದರು. ರಕ್ಷಿಸಿದ ಗೋವುಗಳಿಗೆ ನೀರು ಮತ್ತು ಮೇವಿನ ವ್ಯವಸ್ತೆಯನ್ನು ಬಜರಂಗದಳದ ಕಾರ್ಯಕರ್ತರು ವ್ಯವಸ್ಥೆ ಮಾಡಿರುತ್ತಾರೆ.