ಕಾಣಿಯೂರು: ರಾಜ್ಯದ ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರು ಆಗಿರುವ ಡಿ.ಕೆ.ಶಿವಕುಮಾರ್ ಅವರು ಕಡಬ ತಾಲೂಕಿನ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾ.26ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ಸುಬ್ರಹ್ಮಣ್ಯಕ್ಕೆ ಬಂದು ದೇವರಿಗೆ ಪೂಜೆ ಸಲ್ಲಿಸಿದರು. ದೇವಸ್ಥಾನಕ್ಕೆ ಆಗಮಿಸಿದ ಅವರನ್ನು ದೇವಸ್ಥಾನದ ವತಿಯಿಂದ ಸ್ವಾಗತಿಸಲಾಯಿತು.