ವಿಟ್ಲ: ಅಳಿಕೆ ಗ್ರಾಮದ ಪಂಚಾಯತ್ ಸಭಾಭವನದಲ್ಲಿ ಇತ್ತೀಚೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ರೆಜಿಸ್ಟರ್ಡ್ ಅಳಿಕೆ, ಅಳಿಕೆ ಗ್ರಾಮ ಪಂಚಾಯತ್ ಜಿಲ್ಲಾ ಅಂದತ್ವ ನಿವಾರಣಾ ಸಮಿತಿ ಇದರ ಜಂಟಿ ಆಶ್ರಯದಲ್ಲಿ ಉಚಿತ ವ್ಯೆದ್ಯಕೀಯ ಶಿಬಿರ ನಡೆಯಿತು.
ಕಾರ್ಯಕ್ರಮವನ್ನು ಅಳಿಕೆ ಶ್ರೀ ಸತ್ಯ ಸಾಯಿ ಲೋಕಸೇವಾ ಟ್ರಸ್ಟ್ ನ ಕಾರ್ಯದರ್ಶಿ ಚಂದ್ರಶೇಖರ ಭಟ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸುಮಾರು ನೂರಕ್ಕಿಂತ ಹೆಚ್ಚು ಜನರು ಶಿಬಿರದ ಪ್ರಯೋಜನ ಪಡೆದುಕೊಂಡರು. ಇದೇ ಸಂದರ್ಭದಲ್ಲಿ ಕೆಲವರಿಗೆ ಕನ್ನಡಕವನ್ನು ನೀಡಲಾಯಿತು.
ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ರೂವಾರಿ ಬಾಲಕೃಷ್ಣ ಪೂಜಾರಿ ಸಣ್ಣಗುತ್ತು ಇವರನ್ನು ಗೌರವಿಸಲಾಯಿತು. ಒಡಿಯೂರು ಯೋಜನೆಯ ನಿರ್ದೇಶಕ ಕಿರಣ್ ಕುಮಾರ್ ಉರ್ವ ಸಭೆಯ ಅಧ್ಯಕ್ಷತೆ ವಹಿಸಿದರು.
ಸಭೆಯಲ್ಲಿ ಡಾ. ಶಾಂತರಾಜ್, ಬಾಲಕೃಷ್ಣ ಕಾರಂತ ಎರುಂಬು, ಅಳಿಕೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಧನಂಜಯ್, ಧರ್ಮಸ್ಥಳ ಯೋಜನೆಯ ಮೇಲ್ವಿಚಾರಕಿ ಮಾಲತಿ, ಅಳಿಕೆ ಗ್ರಾಮ ಪಂಚಾಯತ್ ಅಧ್ಯಕ್ಷ ಪದ್ಮನಾಭ ಪೂಜಾರಿ ಎಸ್, ಕಾನ ಈಶ್ವರ ಭಟ್, ಬಾಲಕೃಷ್ಣ ಪೂಜಾರಿ ಸಣ್ಣಗುತ್ತು, ವಿನಯ್, ಪ್ರಜ್ವಲ್, ನಾಗರಾಜ್, ರವೀಶ್, ಉದಯ ಮುಳಿಯ ಉಪಸ್ಥಿತರಿದ್ದರು. ಮಹೇಶ್ ದೂಜಮೂಲೆ ಸ್ವಾಗತಿಸಿದರು. ಸದಾಶಿವ ಶೆಟ್ಟಿ ಮಡಿಯಾಲ ವಂದಿಸಿದರು. ಪ್ರವೀಣ್ ಸಣ್ಣಗುತ್ತು ಕಾರ್ಯಕ್ರಮ ನಿರೂಪಿಸಿದರು. ಸೇವಾ ಪ್ರತಿನಿಧಿ ಅಮಿತಾ, ವಿನಯ, ಪುಟ್ಟಣ್ಣ ಸಹಕರಿಸಿದರು.