




ಪುತ್ತೂರು : ಕಲ್ಲೇಗ ಭಾರತ್ ಮಾತಾ ಸಭಾಭವನದಲ್ಲಿ ಮಂಗಳೂರು ಲೋಕಸಭಾ ಚುನಾವಣೆಗೆ ಸಂಬಂಧಪಟ್ಟಂತೆ ಬಿಜೆಪಿಯ ನಿರ್ವಹಣಾ ಸಮಿತಿಯ ಮೊದಲ ಸಭೆ ಮಾ.26 ರಂದು ನಡೆಯಿತು.ಸಭೆಯಲ್ಲಿ ಸಮಿತಿ ವಿವಿಧ ವಿಭಾಗಗಳ ಪ್ರಮುಖರ ಹೆಸರನ್ನು ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್ ಬೆಳ್ತಂಗಡಿ ಘೋಷಣೆ ಮಾಡಿದರು.ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾಗಿ ಚನಿಲ ತಿಮ್ಮಪ್ಪ ಶೆಟ್ಟಿ ಸಹಸಂಚಾಲಕರಾಗಿ ಉಮೇಶ್ ಕೋಡಿಬೈಲು ಹೆಸರು ಘೋಷಿಸಲಾಗಿದೆ



ಸಭೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಭಾರಿ ಸುಲೋಚನಾ ಜಿ.ಕೆ ಭಟ್, ಪುತ್ತೂರು ನಗರ ಬಿಜೆಪಿ ಅಧ್ಯಕ್ಷ ಪಿ.ಜಿ ಜಗನ್ನಾಥ್ ರಾವ್ ಅಧ್ಯಕ್ಷತೆ ವಹಿಸಿದ್ದರು. ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಮಾಜಿ ಶಾಸಕರಾದ ಸಂಜೀವ ಮಠಂದೂರು, ಮಲ್ಲಿಕಾ ಪ್ರಸಾದ್, ವಿಭಾಗ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಜಿಲ್ಲಾ ಫಲಾನುಭವಿ ಪ್ರಕೋಷ್ಠದ ಸಂಚಾಲಕ ಆಶಾ ತಿಮ್ಮಪ್ಪ ಉಪಸ್ಥಿತರಿದ್ದರು.





ವಿವಿಧ ವಿಭಾಗದ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಮುಖರ ಪಟ್ಟಿ ಇಲ್ಲಿದೆ:












