ಬಿಜೆಪಿಯಿಂದ ಕ್ಷೇತ್ರ ಪ್ರಭಾರಿಗಳ ನಿಯೋಜನೆ

0

ಪುತ್ತೂರು:೨೦೨೪ರ ಲೋಕಸಭಾ ಚುನಾವಣೆಗೆ ಸಂಬಂಧಿಸಿ ದ.ಕ.ಲೋಕಸಭಾ ಕ್ಷೇತ್ರ ವ್ಯಾಪ್ತಿಯ ೮ ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿಯಿಂದ ಪ್ರಭಾರಿಗಳನ್ನು ನಿಯೋಜಿಸಲಾಗಿದೆ.

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸುಲೋಚನಾ ಜಿ.ಕೆ.ಭಟ್ ಅವರನ್ನು ನಿಯೋಜಿಸಲಾಗಿದೆ.ಉಳಿದಂತೆ ದ.ಕ.ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷರಾಗಿರುವ ಎಪಿಎಂಸಿ ಮಾಜಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ಅವರನ್ನು ಮಂಗಳೂರು ಕ್ಷೇತ್ರಕ್ಕೆ, ಪುತ್ತೂರು ಮಂಡಲದ ಮಾಜಿ ಅಧ್ಯಕ್ಷ,ಪುರಸಭೆಯ ಮಾಜಿ ಉಪಾಧ್ಯಕ್ಷರೂ ಆಗಿರುವ ಎಸ್.ಅಪ್ಪಯ್ಯ ಮಣಿಯಾಣಿ ಅವರನ್ನು ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ,ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿರುವ ಪುತ್ತೂರು ಕೋಅಪರೇಟಿವ್ ಟೌನ್ ಬ್ಯಾಂಕ್ ನಿರ್ದೇಶಕ ಚಂದ್ರಶೇಖರ್ ರಾವ್ ಬಪ್ಪಳಿಗೆ ಅವರನ್ನು ಮೂಡಬಿದ್ರೆ ಕ್ಷೇತ್ರಕ್ಕೆ ನಿಯೋಜಿಸಲಾಗಿದೆ.

ಬೆಳ್ತಂಗಡಿ ಕ್ಷೇತ್ರಕ್ಕೆ ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್,ಮಂಗಳೂರು ಉತ್ತರಕ್ಕೆ ದೇವದಾಸ ಶೆಟ್ಟಿ, ಮಂಗಳೂರು ದಕ್ಷಿಣಕ್ಕೆ ಕೊರಗಪ್ಪ ನಾಕ್ ಹಾಗೂ ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ಜಗದೀಶ್ ಶೇಣವ ಅವರನ್ನು ಕ್ಷೇತ್ರದ ಪ್ರಭಾರಿಗಳಾಗಿ ನಿಯೋಜಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here