ವ್ಯಕ್ತಿತ್ವದ ನೆಲೆಯಲ್ಲಿ ಗೌರವ ಸಂಪಾದನೆ : ಭಾಗ್ಯೇಶ್ ರೈ
ಉಪ್ಪಿನಂಗಡಿ:ವಿದ್ಯಾರ್ಥಿ ಜೀವನದಲ್ಲಿನ ಕಲಿಕೆ ವ್ಯಕ್ತಿತ್ವ ನಿರ್ಮಾಣದ ಮೇಲೆ ಪ್ರಭಾವ ಬೀರುತ್ತದೆ. ಉತ್ತಮ ವ್ಯಕ್ತಿತ್ವ ಬೆಳೆಸಿಕೊಂಡು ಜೀವನದಲ್ಲಿ ಗೌರವ ಸಂಪಾದಿಸಿಕೊಳ್ಳಬೇಕು ಎಂದು ವಿದ್ಯಾಮಾತ ಅಕಾಡೆಮಿ ಪುತೂರು ಇಲ್ಲಿನ ಶ್ರೀ ಭಾಗ್ಯೇಶ್ ರೈ ಹೇಳಿದರು. ಅವರು ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ “ಮಾಸ್ಟರಿಂಗ್ ಕಾಂಪಿಟೇಟಿವ್ ಎಕ್ಸಾಮ್ಸ್ : ಸ್ಟ್ರಾಟೆಜೀಸ್ ಫಾರ್ ಸಕ್ಸಸ್ “ ಬಗೆಗಿನ ಕಾರ್ಯಗಾರವನ್ನು ಉದ್ದೇಶಿಸಿ ಮಾತನಾಡಿದರು.
ಪದವಿ ವಿದ್ಯಾರ್ಥಿಗಳು ಸರ್ಕಾರಿ ಹಾಗೂ ಖಾಸಗಿ ಉದ್ಯೋಗಗಳ ಬಗ್ಗೆ ಮಾಹಿತಿ ಪಡೆದು ವ್ಯವಸ್ಥಿತ ಪೂರ್ವ ತಯಾರಿ ಮೂಲಕ ಯಶಸ್ಸು ಕಂಡುಕೊಳ್ಳಬಹುದು ಎಂದು ಹೇಳಿದರು. ವಿವಿಧ ಉದ್ಯೋಗವಕಾಶಗಳ ಬಗ್ಗೆ ಕಾರ್ಯಗಾರದಲ್ಲಿ ಮಾಹಿತಿ ನೀಡಲಾಯಿತು.
ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾಶಾಸ್ತ್ರ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಭರವಸಾಕೋಶ ಆಯೋಜಿಸಿದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರವಿರಾಜ್ ಅಧ್ಯಕ್ಷತೆ ವಹಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ವಾಣಿಜ್ಯ ಮತ್ತು ನಿರ್ವಹಣಾಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಹರಿಪ್ರಸಾದ್ ಎಸ್ ಪದವಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡುವ ಜೊತೆಗೆ ಅದರಲ್ಲಿ ಯಶಸ್ಸು ಪಡೆಯುವ ಹಂತಗಳನ್ನು ವಿವರಿಸುವ ಉದ್ದೇಶವನ್ನು ಈ ಕಾರ್ಯಗಾರ ಹೊಂದಿದೆ ಎಂದು ಹೇಳಿದರು.
ವಾಣಿಜ್ಯ ಮತ್ತು ನಿರ್ವಹಣಾ ಸಂಘದ ಸಂಚಾಲಕ ಅಹಮ್ಮದ್ ಎಸ್.ಎಮ್ ಉಪಸ್ಥಿತರಿದ್ದರು. ಅಂತಿಮ ಬಿ.ಕಾಂ, ಬಿಬಿಎ, ಮತ್ತು ಬಿ.ಎಸ್ ಡಬ್ಲ್ಯೂ ವಿದ್ಯಾರ್ಥಿಗಳು ಕಾರ್ಯಗಾರದ ಪ್ರಯೋಜನ ಪಡೆದರು. ತೃತೀಯ ಬಿ.ಕಾಂ ವಿದ್ಯಾರ್ಥಿನಿಗಳಾದ ಶ್ವೇತ ಜೆ ಕೆ ಸ್ವಾಗತಿಸಿ,ನಿಶ್ಮಿತಾ ಕೆ ಎನ್ ವಂದಿಸಿದರು. ಅನುಷಾ ಕಾರ್ಯಕ್ರಮ ನಿರೂಪಿಸಿದರು.