ನೆಲ್ಯಾಡಿ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಸದಸ್ಯರಾಗಿ ನೆಲ್ಯಾಡಿಯ ಉಷಾ ಅಂಚನ್ ಅವರನ್ನು ನೇಮಕ ಮಾಡಲಾಗಿದೆ.
ಉಷಾ ಅಂಚನ್ ಅವರನ್ನು ಕೆಪಿಸಿಸಿ ಉಪಾಧ್ಯಕ್ಷರೂ, ದ.ಕ. ಚುನಾವಣಾ ಪ್ರಚಾರ ಉಸ್ತುವಾರಿಯೂ ಆಗಿರುವ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಪ್ರಚಾರ ಸಮಿತಿ ಸದಸ್ಯರಾಗಿ ನೇಮಿಸಿದ್ದಾರೆ.
ಉಷಾ ಅಂಚನ್ ಅವರು ತಾಲೂಕು ಪಂಚಾಯತ್ ಸದಸ್ಯೆಯಾಗಿ, ರಾಜ್ಯ ಕಾಂಗ್ರೆಸ್ ಓಬಿಸಿ ಘಟಕದ ಕಾರ್ಯದರ್ಶಿಯಾಗಿ, ಡಿಸಿಸಿ ಸದಸ್ಯೆಯಾಗಿ, ಕಡಬ ಬ್ಲಾಕ್ ಮಹಿಳಾ ಘಟಕದ ಅಧ್ಯಕ್ಷರಾಗಿ ಹಾಗೂ ಪಕ್ಷದ ವಿವಿಧ ಘಟಕಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ನೆಲ್ಯಾಡಿ ಕಾಮಧೇನು ಮಹಿಳಾ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ, ವಿವಿಧ ಸಾಮಾಜಿಕ, ಶೈಕ್ಷಣಿಕ ಸಂಸ್ಥೆಗಳಲ್ಲಿಯೂ ತೊಡಗಿಕೊಂಡಿದ್ದಾರೆ.